‘ಕಾಫಿ ಕಿಂಗ್’ ಸಿದ್ಧಾರ್ಥ ಸಾವು

‘ಕಾಫಿ ಕಿಂಗ್’ ಸಿದ್ಧಾರ್ಥ ಸಾವು

ಬೆಂಗಳೂರು, ಜು.31 : ಸಾವಿರಾರು ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ ಬದುಕು ಕಟ್ಟಿಕೊಟ್ಟಿದ್ದ ಉದ್ಯಮಿ ಬದುಕಿ ಬರಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಟ್ವೀಟ್ ಮೂಲಕ ಸಿದ್ಧಾರ್ಥ ಅಗಲುವಿಕೆಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ‘ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ಅವರ ಅಳಿಯ ಕೆಫೆ ಕಾಫಿ ಡೇ ಸಂಸ್ಥಾಪಕ ಹಾಗೂ ಉದ್ಯಮಿ ಸಿದ್ದಾರ್ಥ್ ಅವರ ಸಾವು ತೀವ್ರ ಆಘಾತ ಹಾಗೂ ಅಪಾರ ನೋವು ತಂದಿದೆ. ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ.

36 ಗಂಟೆಗಳ ಹಿಂದೆ ನಾಪತ್ತೆಯಾಗಿದ್ದ ಕಾಪೀ ಡೇ ಮಾಲೀಕನ ಮೃತದೇಹ ನೇತ್ರಾವತಿ ನದಿಯಲ್ಲಿ ಇಂದು ಬುಧವಾರ ಬೆಳಗ್ಗೆ ಪತ್ತೆಯಾಗಿದೆ. ಅಂತಾರಷ್ಟ್ರೀಯ ಮಟ್ಟದಲ್ಲಿ ಕಾಫೀ ಕಂಪು ಪಸರಿಸಿದ್ದ ‘ಕಾಫಿ ಕಿಂಗ್’ ಒಡೆಯ ವಿ. ಜೆ. ಸಿದ್ಧಾರ್ಥ ಅನಿರೀಕ್ಷಿತ ಅಗಲುವಿಕೆಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. ನಾಪತ್ತೆಯಾಗಿದ್ದ ‘ಕಾಫಿ ರಾಜ’ ಸಿದ್ಧಾರ್ಥ ಮೃತದೇಹ ಪತ್ತೆ 36 ಗಂಟೆಗಳ ಬಳಿಕ ನೇತ್ರಾವತಿ ನದಿ ಹಿನ್ನೀರಿನಲ್ಲಿ ಪತ್ತೆಯಾಗಿದೆ. ಸಿದ್ಧಾರ್ಥ ಅನಿರೀಕ್ಷಿತ ಅಗಲುವಿಕೆಗೆ ಕಂಬನಿ ಮಿಡಿದ ಗಣ್ಯರು

ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ಅವರ ಅಳಿಯ ಕೆಫೆ ಕಾಫಿ ಡೇ ಸಂಸ್ಥಾಪಕ ಹಾಗೂ ಉದ್ಯಮಿ ಸಿದ್ದಾರ್ಥ್ ಅವರ ಸಾವು ತೀವ್ರ ಆಘಾತ ಹಾಗೂ ಅಪಾರ ನೋವು ತಂದಿದೆ. ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ.

 

ಫ್ರೆಶ್ ನ್ಯೂಸ್

Latest Posts

Featured Videos