ಬೆಂಗಳೂರು, ಅ. 6 : ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ನಾನೇ ಕಣಕ್ಕಿಳಿಯುತ್ತೇನೆ ಎಂದು ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಬಿ.ಕೋಳಿವಾಡ ಸ್ಪಷ್ಟಪಡಿಸಿದ್ದಾರೆ. ಖಾಸಗಿ ಹೋಟೆಲ್ನಲ್ಲಿಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ತೀರ್ಪು ಹೊರ ಬಿದ್ದು ಚುನಾವಣೆ ನಡೆದಿದ್ದೇ ಆದರೆ ಅಭ್ಯರ್ಥಿಯಾಗಿ ನಾನೇ ಕಣಕ್ಕಿಳಿಯುತ್ತೇನೆ.