ಮೇ 12ಕ್ಕೆ ಕಾಮೆಡ್‌ ಕೆ ಪ್ರವೇಶ ಪರೀಕ್ಷೆ

ಮೇ 12ಕ್ಕೆ ಕಾಮೆಡ್‌ ಕೆ ಪ್ರವೇಶ ಪರೀಕ್ಷೆ

ಬೆಂಗಳೂರು, ಮಾ, 26, ನ್ಯೂಸ್ ಎಕ್ಸ್ ಪ್ರೆಸ್: ಖಾಸಗಿ ಎಂಜಿನಿಯರಿಂಗ್‌ ಕಾಲೇಜು ಹಾಗೂ ಖಾಸಗಿ ವಿಶ್ವವಿದ್ಯಾಲಯಗಳ ಎಂಜಿನಿಯರಿಂಗ್‌ ಸೀಟು ಹಂಚಿಕೆಗೆ ಕಾಮೆಡ್‌-ಕೆ, ಯುನಿಗೇಜ್‌ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಮೇ 12ರಂದು ನಡೆಯಲಿದೆ.

ದೇಶದ 180ಕ್ಕೂ ಅಧಿಕ ಶಿಕ್ಷಣ ಸಂಸ್ಥೆ ಹಾಗೂ 21ಕ್ಕೂ ಅಧಿಕ ಖಾಸಗಿ ವಿಶ್ವವಿದ್ಯಾಲಯಗಳ ಸೀಟು ಈ ಮೂಲಕ ಹಂಚಿಕೆಯಾಗಲಿದೆ. 400 ಪರೀಕ್ಷಾ ಕೇಂದ್ರದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಆನ್‌ಲೈನ್‌ ಮೂಲಕ ನಡೆಯಲಿದ್ದು, ರಾಜ್ಯದ ಸುಮಾರು 20 ಸಾವಿರ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಅಭ್ಯರ್ಥಿಗಳು ಏ.19ರೊಳಗೆ www.comedk.org ಅಥವಾ www.unigaege.com ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಪರೀಕ್ಷೆಯೂ ಆನ್‌ಲೈನ್‌ ನಲ್ಲಿ ನಡೆಯಲಿದೆ. ಪರೀಕ್ಷೆ ಹಾಗೂ ಅರ್ಜಿ ಸಲ್ಲಿಸುವ ಎಲ್ಲ ವಿಧಾನದ ಸಂಪೂರ್ಣ ಮಾಹಿತಿ ಮೇಲಿನ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಕಾಮೆಡ್‌-ಕೆ ರ್‍ಯಾಂಕ್‌ ಪಡೆದ ಅಭ್ಯರ್ಥಿಗಳು ಜೂನ್‌ ಅಥವಾ ಜುಲೈನಲ್ಲಿ ನಡೆಯಲಿರುವ ಕೇಂದ್ರೀಕೃತ ಕೌನ್ಸೆಲಿಂಗ್‌ ವ್ಯವಸ್ಥೆಯಲ್ಲಿ ಪಾಲ್ಗೊಳ್ಳಬೇಕಾಗುತ್ತದೆ.

ಫ್ರೆಶ್ ನ್ಯೂಸ್

Latest Posts

Featured Videos