ಕಮೀಷನ್ ದಂದೆ ವಿಚಾರಕ್ಕೆ ಹೆಚ್.ಡಿ.ಕೆ ಗೆ ತಿರುಗೇಟು

ಕಮೀಷನ್ ದಂದೆ ವಿಚಾರಕ್ಕೆ ಹೆಚ್.ಡಿ.ಕೆ ಗೆ ತಿರುಗೇಟು

ಬೆಂಗಳೂರು, ಆ. 19 : ವರ್ಗಾವಣೆ ದಂಧೆ ವಿಚಾರವಾಗಿ ಸಿಎಂಯಡಿಯೂರಪ್ಪ ಸ್ವತಃ ತಮ್ಮ ಪುತ್ರನನ್ನೇ ಬಿಟ್ಟಿದ್ದಾರೆ ಎಂಬ ಹೆಚ್.ಡಿ ಕುಮಾರಸ್ವಾಮಿ ಮಾತಿಗೆ ಸಿಎಂ ಹಾಗೂ ಅವರ ಪುತ್ರ ತಿರುಗೇಟು ನೀಡಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್ ಮಾಡಿ, ಸಿಎ ಪುತ್ರ ವಿಜಯೇಂದ್ರ ಅವರು, ಕಮೀಷನ್ ದಂಧೆ, ವರ್ಗಾವಣೆ ದಂಧೆ, ನೇಮಕಾತಿ ದಂಧೆಗಳ ಜನಕರು ಹಾಗೂ ಗುತ್ತಿಗೆದಾರರು ನೀವು ಎನ್ನುವುದು ಇಡೀ ರಾಜ್ಯಕ್ಕೇ ತಿಳಿದಿದೆ ಕುಮಾರಸ್ವಾಮಿಯವರೇ. ಕೋತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿದಂತಿದೆ ನಿಮ್ಮ ಮಾತುಗಳು. ಸಿಬಿಐ ತನಿಖೆಗೆ ಹೆದರಿ ಹತಾಶ ಹೇಳಿಕೆ ನೀಡುತ್ತಿದ್ದೀರಿ. ವಿಷಯಾಂತರಗೊಳಿಸಿ ಜನತೆಯ ದಿಕ್ಕು ತಪ್ಪಿಸುವ ಕುತಂತ್ರದ ಮಾತು ನಿಲ್ಲಿಸಿ ಎಂದು ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos