ಟಿಕೆಟ್ ಗಾಗಿ ಪೈಪೋಟಿ

ಟಿಕೆಟ್ ಗಾಗಿ ಪೈಪೋಟಿ

ಬೆಂಗಳೂರು, ನ. 11: ಮಹಾಲಕ್ಷ್ಮಿ  ಲೇಔಟ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್ ಗೆ ಪೈಪೋಟಿ ಏರ್ಪಟ್ಟಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಗಿರೀಶ್ ಕೆ.ನಾಶಿ ಕೂಡ ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದರೆ ಜೆಡಿಎಸ್ನಿಂದ ಕಣಕ್ಕಿಳಿಯಲು ಉದ್ದೇಶಿಸಿದ್ದಾರೆ ಎನ್ನಲಾಗಿದೆ. ಮಾಜಿ ಶಾಸಕ ನರೇಂದ್ರ ಬಾಬು ಅವರು ಕೂಡ ಜೆಡಿಎಸ್ನಿಂದ ಸ್ಪರ್ಧಿಸುವ ಬಗ್ಗೆ ಒಲವು ತೋರಿದ್ದಾರೆ ಎಂದು ಚರ್ಚೆಯಾಗುತ್ತಿದೆ.

ಕೊನೆ ಗಳಿಗೆಯಲ್ಲಿ ಜೆಡಿಎಸ್ ಯಾರಿಗೆ ಟಿಕೆಟ್ ನೀಡಿ ಕಣಕ್ಕಿಳಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿ ಚುನಾಯಿತರಾಗಿದ್ದ ಗೋಪಾಲಯ್ಯ ಅವರು ಪಕ್ಷ ತೊರೆದಿದ್ದು, ಬಿಜೆಪಿಯಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ. ಒಂದು ವೇಳೆ ಸ್ಪರ್ಧೆಗೆ ಅವಕಾಶ ದೊರೆಯದಿದ್ದರೆ ಗೋಪಾಲಯ್ಯ ಅವರ ಪತ್ನಿ, ಮಾಜಿ ಉಪಮೇಯರ್ ಹೇಮಲತಾ ಗೋಪಾಲಯ್ಯ ಅವರನ್ನು ಕಣಕ್ಕಿಳಿಸುವ ಸಾಧ್ಯತೆಗಳಿವೆ.

 

 

ಫ್ರೆಶ್ ನ್ಯೂಸ್

Latest Posts

Featured Videos