ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ: ಮಾಯಾವತಿ

ಯಾವುದೇ ರಾಜ್ಯದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ: ಮಾಯಾವತಿ

ಲಕ್ನೋ, ಮಾ.12, ನ್ಯೂಸ್ ಎಕ್ಸ್ ಪ್ರೆಸ್: ಮುಂದಿನ ತಿಂಗಳು ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಯಾವುದೇ ರಾಜ್ಯದಿಂದಲೂ ನಾವು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲ್ಲ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ನಾಯಕಿ ಮಾಯಾವತಿ ಅವರು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಬಿಜೆಪಿಯ ಅಭ್ಯರ್ಥಿಗಳನ್ನು ಸೋಲಿಸಲು ಸಮಾಜವಾದಿ ಪಕ್ಷ (ಎಸ್‍ಪಿ) ಜೊತೆಗೆ ಮೈತ್ರಿ ಮಾಡಿಕೊಂಡಿದ್ದೇವೆ. ಪರಸ್ಪರ ಗೌರವ ನೀಡಲು ಹಾಗೂ ಪ್ರಾಮಾಣಿಕ ಉದ್ದೇಶದಿಂದ ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ಅವರ ಜೊತೆಗೆ ಕೈಜೋಡಿಸಿದ್ದೇವೆ. ಈ ಮೈತ್ರಿ ಬಿಜೆಪಿಯನ್ನು ಸೋಲಿಸಲು ಪರಿಪೂರ್ಣ ಶಕ್ತಿ ಹೊಂದಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಯಾವತಿ ಅವರು, ಬಿಎಸ್‍ಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಅನೇಕ ಪಕ್ಷಗಳು ಮುಂದಾಗುತ್ತಿವೆ. ಚುನಾವಣೆ ಉದ್ದೇಶದಿಂದ ಮೈತ್ರಿಯನ್ನು ಮಾಡಿಕೊಂಡರೆ ಪಕ್ಷದ ಸಿದ್ಧಾಂತ, ಹೋರಾಟಕ್ಕೆ ಧಕ್ಕೆಯಾಗುತ್ತದೆ. ಹೀಗಾಗಿ ಎಸ್‍ಪಿ ಹೊರತಾಗಿ ಯಾವುದೇ ಪಕ್ಷದ ಜೊತೆಗೆ ಮೈತ್ರಿ ಇಲ್ಲವೆಂದು ಸ್ಪಷ್ಟಪಡಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos