ವಿದ್ಯಾರ್ಥಿಗಳಿಗೆ ಅಭಿನಂದನೆ ಶ್ಲಾಘನೀಯ

ವಿದ್ಯಾರ್ಥಿಗಳಿಗೆ ಅಭಿನಂದನೆ ಶ್ಲಾಘನೀಯ

ಮಾಲೂರು: ತಾಲೂಕಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಮುಂದಿನ ವಿದ್ಯಾರ್ಥಿಗಳಿಗೆ ಸ್ಪೂರ್ತಿಯನ್ನು ನೀಡುತ್ತಿರುವುದು ಕಿಚ್ಚಿ ಸುದೀಪ್ ಅಭಿಮಾನಿಗಳ ಶ್ಲಾಘನೀಯವಾದದು ಎಂದು ಕಾಲೇಜಿನ ಪ್ರಾಂಶುಪಾಲ ಎಂ.ರವಿಕುಮಾರ್ ಹೇಳಿದರು.

ಪಟ್ಟಣದ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಸಭಾಂಗದಲ್ಲಿ ಆಲ್‌ಇಂಡಿಯಾ ಬಾದ್‌ಷಾ ಕಿಚ್ಚ ಸುದೀಪ್ ಪ್ಯಾನ್ಸ್ ಆಸೋಸಿಯೇಷನ್ ವತಿಯಿಂದ ಹಮ್ಮಿಕೊಂಡಿದ್ದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕರ‍್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಚಲನಚಿತ್ರ ನಟರ ಅಭಿಮಾನಿಗಳಿಂದರೇ ಕೇವಲ ತನ್ನ ನೆಚ್ಚಿನ ಹೀರೋಗಳ ಕಟೌಟ್, ಬ್ಯಾನರ್, ಕೇಕ್ ಕತ್ತರಿಸುವುದು, ಶಿಳ್ಳೇ ಚಪ್ಪಾಳೆ, ಜಗಳ ಎನ್ನುವ ಕಾಲದಲ್ಲಿ ಆಲ್‌ಇಂಡಿಯಾ ಬಾದ್‌ಷಾ ಕಿಚ್ಚ ಸುದೀಪ್ ಪ್ಯಾನ್ಸ್ ಆಸೋಸಿಯೇಷನ್ ನೆಚ್ಚಿನ ನಟನ ಹುಟ್ಟು ಹಬ್ಬಕ್ಕೆ ಅಭಿಮಾನಿಗಳು ತಾಲೂಕಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಮುಂದಿನ ವಿದ್ಯಾರ್ಥಿಗಳಿಗೆ ಸ್ಪೂರ್ತಿಯನ್ನು ನೀಡುತ್ತಿದ್ದಾರೆ. ವಿದ್ಯಾರ್ಥಿಗಳು ಅಭಿನಂದನೆ ಸ್ವೀಕರಿಸಿ ಸಮಾಜಕ್ಕೆ ಉತ್ತಮ ಪ್ರಜೆಗಳಾಗಬೇಕು. ನಿಮ್ಮ ಗುರಿಯನ್ನು ಮುಟ್ಟುವಂತಾಗಬೇಕು. ಶೈಕ್ಷಣಿಕ ಪ್ರಗತಿ ಸಮಯದಲ್ಲಿ ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ. ಮುಂದಿನ ಶೈಕ್ಷಣಿಕ ಪ್ರಗತಿಯಲ್ಲಿ ಹೆಚ್ಚಿನ ಸಾಧನೆ ಮಾಡಿ ಶಿಕ್ಷಕರಿಗೆ, ಪೋಷಕರಿಗೆ ಗೌರವ ತರುವ ಕೆಲಸ ಮಾಡಬೇಕು ಎಂದರು.

ಕಿಚ್ಚ ಸುದೀಪ್ ಅವರ ಹುಟ್ಟು ಹಬ್ಬದ ಅಂಗವಾಗಿ ತಾಲೂಕಿನ ೫೦ ಪ್ರೌಢಶಾಲೆಗಳ ೨೦೧೯-೨೦ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ದ್ವೀತಿಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ೨೫ ವಿಧ್ಯಾರ್ಥಿಗಳನ್ನು ಅಭಿನಂದಿಸಿ ಗೌರವಿಸಲಾಯಿತು.

 

ಫ್ರೆಶ್ ನ್ಯೂಸ್

Latest Posts

Featured Videos