ಬೆಂಗಳೂರು, ಜು. 8 : ಪಕ್ಷೇತರ ಶಾಸಕ ಎಚ್.ನಾಗೇಶ್ ಬಿಜೆಪಿಗೆ ಬೆಂಬಲ ನೀಡಿರುವುದರ ಜೊತೆಗೆ ಈಗಾಗಲೇ 13 ಮಂದಿ ಶಾಸಕರು ರಾಜೀನಾಮೆ ಕೊಟ್ಟಿರುವ ಕಾರಣ ದೋಸ್ತಿ ಸರ್ಕಾರ ಬಹುಮತ ಕಳೆದುಕೊಂಡಿದ್ದು ಯಾವುದೇ ಕ್ಷಣದಲ್ಲೂ ಪತನ ಸಾಧ್ಯತೆ ಇದೆ. 13 ಶಾಸಕರು ರಾಜೀನಾಮೆ ನೀಡಿರುವುದು ಕಾಂಗ್ರೆಸ್-ಜೆಡಿಎಸ್ ಬೆಂಬಲ 105ಕ್ಕೆ ಇಳಿದಿದೆ. ಹೆಚ್.ನಾಗೇಶ್ ರಾಜ್ಯಪಾಲರಿಗೆ ನೀಡಿರುವ ಪತ್ರದಲ್ಲಿ ಬಿಜೆಪಿಗೆ ಬೆಂಬಲ ನೀಡುವುದಾಗಿ ಹೇಳಿರುವುದರಿಂದ ಅವರ ಸಂಖ್ಯೆ 106ಕ್ಕೆ ಏರಿಕೆಯಾಗಿದೆ. ಇನ್ನೂ ಕೆಲವು ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಕಂಡುಬರುತ್ತಿರುವುದರಿಂದ ಮೈತ್ರಿ ಬಲ 100ಕ್ಕಿಂತಲೂ ಕಡಿಮೆಯಾಗುವ ಸಾಧ್ಯತೆಯೇ ಹೆಚ್ಚಾಗಿದೆ. ವಿಧಾನಸಭೆಯ ಒಟ್ಟು 224 ಸದಸ್ಯರಲ್ಲಿ ಕಳೆದ ಶನಿವಾರದವರೆಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ 118, ಬಿಜೆಪಿ 105 ಹಾಗೂ ಬಿಎಸ್ಪಿಯ ಓರ್ವ ಶಾಸಕ ಇದ್ದಾರೆ.