ಕಾಂಗ್ರೆಸ್‌ ಗೆ ಮರಳಿದ ಮುದ್ದಹನುಮೇಗೌಡ

ಕಾಂಗ್ರೆಸ್‌ ಗೆ ಮರಳಿದ ಮುದ್ದಹನುಮೇಗೌಡ

ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾತನಾಡಿದ ಮುದ್ದಹನುಮೇಗೌಡ, ನಾನು ಪಕ್ಷಾಂತರ ಮಾಡಿದ್ದಕ್ಕೆ ನನಗೆ ಮುಜುಗರ ಆಗಿದೆ. ಚುನಾವಣೆಗೆ ಸ್ಪರ್ಧೆ ಮಾಡಲು ಪಕ್ಷಾಂತರ ಮಾಡಿದ್ದೆ. ತಪ್ಪಿನ ಅರಿವು ಆಗಿ, ಯಾವ ಪಕ್ಷ ರಾಜಕೀಯ ಜೀವ ಕೊಟ್ಟಿದೆ ಆ ಪಕ್ಷದಲ್ಲಿ ಸೇವೆ ಸಲ್ಲಿಸಬೇಕು ಎಂದು ಕಾಂಗ್ರೆಸ್ ಗೆ ಬಂದಿದ್ದೇನೆ. ಸಾರ್ವಜನಿಕ ಬದುಕಿನಲ್ಲಿ ಸ್ವಲ್ಪ ಹೆಸರು ಮಾಡಿ ಉಳಿಸಿಕೊಳ್ಳಬೇಕು. ನಾನು ಕಾಂಗ್ರೆಸ್ ಪಕ್ಷ ಅಭಾರಿಯಾಗಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲಿ ನನ್ನ ಮುಂದಿನ ಸಾರ್ವಜನಿಕ ಬದುಕು ನಡೆಸುತ್ತೇನೆ ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಅವರು ತುಮಕೂರು ಕ್ಷೇತ್ರದಿಂದ ಅವರನ್ನು ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ ಮುದ್ದಹನುಮೇಗೌಡ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳನ್ನು ಈ ಬಾರಿ ಗೆದ್ದೇ ಗೆಲ್ಲುತ್ತದೆ. ಯಾರು ಏನೇ ಹೇಳಿದರು ನಾವು ನೂರಕ್ಕೆ ನೂರು ಗೆಲ್ಲುತ್ತೇವೆ. ಒಗ್ಗಟ್ಟಿನಿಂದ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೆ ಅದನ್ನು ಮರೆತು ಗೆಲ್ಲಬೇಕು ಎಂಬ ಛಲದಿಂದ ಎಲ್ಲರೂ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯವರು ಯಾರನ್ನು ಸೂಚಿಸುತ್ತಾರೋ ಅವರನ್ನೇ ಅಭ್ಯರ್ಥಿ ಮಾಡುತ್ತೇವೆ. ತುಮಕೂರು ಜಿಲ್ಲೆಯಲ್ಲಿ ಗೆಲ್ಲಲು ಅವಕಾಶವಿದೆ. ಒಳ್ಳೆಯ ವಾತಾವರಣವಿದೆ ಸರ್ಕಾರ ಕೂಡ ಜನಪರವಾದ ಕೆಲಸಗಳನ್ನು ಮಾಡಿದೆ. ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಅದರಿಂದ ಇಡೀ ರಾಜ್ಯದಲ್ಲಿ ಒಳ್ಳೆಯ ವಾತಾವರಣವಿದೆ ಎಂದು ಹೇಳಿದ್ದಾರೆ.

ಮುದ್ದಹನುಮೇಗೌ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಚಿವರಾದ ಜಿ ಪರಮೇಶ್ವರ್ ಕೆ ಎನ್ ರಾಜಣ್ಣ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಬಿ ಎನ್ ಚಂದ್ರಪ್ಪ, ಮಾಜಿ ಸಚಿವ ವೆಂಕಟರಮಣಪ್ಪ ಅವರ ಸಮ್ಮುಖದಲ್ಲಿ ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos