ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ‘ರಾಜ್ ಬಬ್ಬರ್’ ರಾಜೀನಾಮೆ!

ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ‘ರಾಜ್ ಬಬ್ಬರ್’ ರಾಜೀನಾಮೆ!

ಲಕ್ನೋ ಮೇ. 24, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆ ಮುಕ್ತಾಯವಾಗಿದೆ. ಕರ್ನಾಟಕದಂತೆ ಉತ್ತರ ಪ್ರದೇಶದಲ್ಲಿಯೂ ಕೂಡ 80 ಕ್ಷೇತ್ರಗಳ ಪೈಕಿ  62 ಸ್ಥಾನಗಳಲ್ಲಿ ಬಿಜೆಪಿ ವಿಜಯಿಯಾಗಿದ್ದು, ಈ ಜಯ ಇಲ್ಲಿನ ಕಾಂಗ್ರೆಸ್ ರಾಜ್ಯಾಧ್ಯಕ್ಷ ಪಟ್ಟಕ್ಕೆ ಕುತ್ತು ತಂದಿದೆ. ದೇಶದಲ್ಲಿ ಬಿಜೆಪಿ ಅತಿ ಹೆಚ್ಚಿನ ಸ್ಥಾನ ಗಳಿಸಿದ್ದು ಮತ್ತೊಮ್ಮೆ ಮೋದಿ ಅಲೆ ಎಲ್ಲೆಡೆ ಹರಡಿದೆ. ಸೋಲಿನ ನೈತಿಕ ಹೊಣೆಹೊತ್ತು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ರವಾನಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಕೇವಲ 1 ಸ್ಥಾನ ಗೆಲ್ಲುವಲ್ಲಿ ಮಾತ್ರವೇ ಸಫಲವಾಗಿದ್ದು, ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos