ಕಾಂಗ್ರೆಸ್ ಗೆ ವಿದಾಯ ಹೇಳಿದ ರೋಷನ್

ಕಾಂಗ್ರೆಸ್ ಗೆ ವಿದಾಯ ಹೇಳಿದ ರೋಷನ್

ಬೆಂಗಳೂರು, ಜು. 9: ಸಮ್ಮಿಶ್ರ ಸರ್ಕಾರದ ಕಾಂಗ್ರೆಸ್ನ ಹಿರಿಯ ನಾಯಕ ರೋಷನ್ ಬೇಗ್ ರಾಜೀನಾಮೆ ನೀಡಿದ್ದಾರೆ.
ಇಂದು ಮಧ್ಯಾಹ್ನದ ವೇಳೆಗೆ ಸ್ಪೀಕರ್ ಕಚೇರಿಗೆ ಆಗಮಿಸಿದ ಅವರು, ರಾಜೀನಾಮೆ ಸಲ್ಲಿಸಿದರು. ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ಖುದ್ದಾಗಿ ಸ್ಪೀಕರ್ ಅವರನ್ನು ಭೇಟಿ ಮಾಡಿ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದರು.
ನಾನು ಮುಂಬೈಗೂ ಹೋಗುವುದಿಲ್ಲ. ಗೋವಾಕ್ಕೂ ಹೋಗುವುದಿಲ್ಲ. ರಾಜ್ಯ ಸರ್ಕಾರದ ಹಜ್ಕಮಿಟಿಯ ಅಧ್ಯಕ್ಷನಾಗಿದ್ದೇನೆ. ಸುಮಾರು ಮೂರು ವಿಮಾನಗಳಲ್ಲಿ ಹಜ್ ಯಾತ್ರಿಕರು ಇಂದು ತೆರಳುತ್ತಿದ್ದಾರೆ. ಅವರನ್ನು ಕಳುಹಿಸಿಕೊಡುವುದರಲ್ಲಿ ನಾನು ಬ್ಯುಸಿಯಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos