‘ಎಂಐಎಂ ಮುಖಂಡ’ನ ಒಡನಾಟವೇ ಪ್ರಾಣಕ್ಕೆ ಮುಳುವಾಯ್ತಾ?

‘ಎಂಐಎಂ ಮುಖಂಡ’ನ ಒಡನಾಟವೇ ಪ್ರಾಣಕ್ಕೆ ಮುಳುವಾಯ್ತಾ?

ವಿಜಯಪುರ, ಮೇ. 17, ನ್ಯೂಸ್ ಎಕ್ಸ್ ಪ್ರೆಸ್: ಕಾಂಗ್ರೆಸ್ ನಾಯಕಿ ರೇಷ್ಮಾ ಪಡೇಕನೂರ ಅವರ ಕೊಲೆಯಾಗಿದ್ದು, ಕೊಲ್ಹಾರ ಬಳಿಯ ಕೃಷ್ಣಾ ನದಿಯ ಸೇತುವೆ ಕೆಳಗೆ ರೇಷ್ಮಾ ಅವರ ಶವ ಪತ್ತೆಯಾಗಿದೆ. ನಿನ್ನೆ ದುಷ್ಕರ್ಮಿಗಳು ಕೊಲೆ ಮಾಡಿ ಶವ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಕಳೆದ ರಾತ್ರಿ ಮಹಾರಾಷ್ಟ್ರದ ಎಂಐಎಂ ಮುಖಂಡನೊಬ್ಬನೊಂದಿಗೆ ರೇಷ್ಮಾ ಕಾರಿನಲ್ಲಿ ತೆರಳಿದ್ದರು ಎನ್ನಲಾಗಿದೆ.

ಜೆಡಿಎಸ್‍ನಲ್ಲಿ ಗುರುತಿಸಿಕೊಂಡಿದ್ದ ರೇಷ್ಮಾ

2018ರ ವಿಧಾನಸಭಾ ಚುನಾವಣೆಗೂ ಮೊದಲು ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ರೇಷ್ಮಾ ಪಾಡೇಕನೂರ ಅವರು, ಜಿಲ್ಲಾಧ್ಯೆಕ್ಷೆಯಾಗಿಯೂ ಕಾರ್ಯನಿರ್ವಹಿಸಿದ್ದರು. 2013ರ ಚುನಾವಣೆಯಲ್ಲಿ ದೇವರ ಹಿಪ್ಪರಗಿ ಕ್ಷೇತ್ರದಿಂದ ಜೆಡಿಎಸ್​ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನುಭವಿಸಿದ್ದರು.

ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆ

ಬಳಿಕ 2018ರ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಿಂದ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ  ಜೆಡಿಎಸ್ ತೊರೆದು, ಗೃಹ ಸಚಿವ ಎಂ.ಬಿ.ಪಾಟೀಲ ನೇತೃತ್ವದಲ್ಲಿ, ಸಿದ್ದರಾಮಯ್ಯ ಸಮ್ಮುಖ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು. ಪಕ್ಷದಲ್ಲಿ ಯಾವುದೇ ಜವಾಬ್ದಾರಿ ಹೊಂದಿರಲಿಲ್ಲ. ಚುನಾವಣೆ ಸಂದರ್ಭ ಮಾತ್ರ ಸಕ್ರಿಯರಾಗಿದ್ದರು.

ಎಂಐಎಂ ಮುಖಂಡನಿಗೂ ರೇಷ್ಮಾ ಕೊಲೆಗೂ ನಂಟು?

ರೇಷ್ಮಾ ಪಡೆಕನೂರು ಸೊಲ್ಲಾಪುರದ ಎಂಐಎಂ ಮುಖಂಡರೊಬ್ಬರ ಜೊತೆ ಒಡನಾಟ ಹೊಂದಿದ್ರು. ಈ ವಿಷಯದಲ್ಲಿ ಹಿಂದೊಮ್ಮೆ ಎಂಐಎಂ ಮುಖಂಡನ ಪತ್ನಿ ರೇಷ್ಮಾ ಬಳಿ ರಂಪಾಟ ನಡೆಸಿದ್ರು ಎನ್ನಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡು ವಿಜಯಪುರ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸ್ತಿದ್ದು, ಶೀಘ್ರವೇ ಆರೋಪಿಗಳನ್ನು ಹಿಡಿಯೋ ಭರವಸೆ ವ್ಯಕ್ತಪಡಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos