ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಇಂದು ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆಯನ್ನು ಕೈಗೊಂಡಿದ್ದಾರೆ.
ವಿಧಾನಸೌಧದ ಗಾಂಧಿ ಪ್ರತಿಮೆ ಎದುರುಗಡೆ ರಾಜ್ಯಪಾಲರಿಗೆ ದಿಕ್ಕಾರ ಕೂಗುತ್ತಾ, ಬಿಜೆಪಿ ಕೈಗೊಂಬೆಯಾಗಿರುವ ರಾಜ್ಯಪಾಲರಿಗೆ ಧಿಕ್ಕಾರ ಧಿಕ್ಕಾರ ಎಂದು ಕೂಗುತ್ತಾ ಪ್ರತಿಭಟನೆಯನ್ನು ನಡೆಸಿದರು.
ಹೌದು, ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ಇಂದು (ಶನಿವಾರ ಆ. 31) ರಂದು ಪ್ರತಿಭಟನೆ ನಡೆಸಿತು.
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಸಂದರ್ಭದಲ್ಲಿ ಗೆಹ್ಲೋಟ್ ತಮ್ಮ ವಿರುದ್ಧ ತಾರತಮ್ಯ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು. ಇದನ್ನೂ ಓದಿ:
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ತನಿಖೆ ನ್ಯಾಯಯುತವಾಗಿರಬೇಕು ಎಂದು ನಾವು ರಾಜ್ಯಪಾಲರನ್ನು ಒತ್ತಾಯಿಸುತ್ತೇವೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ತನಿಖೆಯಾಗಿದೆ. ಆದ್ದರಿಂದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಸಂವಿಧಾನದ ಪ್ರಕಾರ ಅನುಮತಿ ನೀಡಿ, ಕಾನೂನು ಕ್ರಮ ತೆಗೆದುಕೊಳ್ಳಬೇಕು. ಅನೇಕ ಒತ್ತಡವಿದ್ದರೂ ರಾಜ್ಯಪಾಲರು ಸೂಕ್ತ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸವಿದೆ ಎಂದರು.
ಪ್ರಜಾತಾಂತ್ರಿಕವಾಗಿ ಚುನಾಯಿತವಾದ ಸರ್ಕಾರಗಳನ್ನು ವಾಮ ಮಾರ್ಗದಲ್ಲಿ ಅಸ್ಥಿರಗೊಳಿಸುವ ಕೇಂದ್ರ ಸರ್ಕಾರ ಮತ್ತು ರಾಜಭವನದ ಷಡ್ಯಂತ್ರಗಳನ್ನು ವಿರೋಧಿಸಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ಧನ ರೆಡ್ಡಿ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದ ರಾಜ್ಯಪಾಲರ… pic.twitter.com/GhaIVlsfMm
— CM of Karnataka (@CMofKarnataka) August 31, 2024