ಬೆಂಗಳೂರು: ಲೋಕ ಚುನಾವಣೆಯಲ್ಲಿ ಬಿಜೆಪಿಗೆ ಸೆಡ್ಡು ಹೊಡಿಯಬೇಕೆಂದು ಸಂಕಲ್ಪ ಮಾಡಿರುವ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಕಲಬುರಗಿಗೆ ಭೇಟಿ ನೀಡಲಿದ್ದಾರೆ. ವಿಶೇಷ ವಿಮಾನದಲ್ಲಿ ಕಲಬುರಗಿಗೆ ಆಗಮಿಸಲಿರುವ ಖರ್ಗೆ HKE ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದೇವೇಳೆ ಕೈ ಮುಖಂಡರ ಜೊತೆ ಗೌಪ್ಯ ಮೀಟಿಂಗ್ ಮಾಡಲಿದ್ದಾರೆ ಎನ್ನಲಾಗಿದೆ.