ನೇಹಾ ಕೊಲೆ ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ

ನೇಹಾ ಕೊಲೆ ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ

ಬೆಳಗಾವಿ: ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ನಗರದಲ್ಲಿಂದು ಕಾಂಗ್ರೆಸ್‌ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಭವನದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಆರೋಪಿ ಫಯಾಜ್ ಅಣಕು ಪ್ರತಿಕೃತಿಗೆ ನೇಣು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಬೆಳಗಾವಿ ಉತ್ತರ ಶಾಸಕ ಆಸೀಫ್​ ಸೇಠ್, ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ, ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗಿಯಾಗಿದ್ದರು.

ಶಾಸಕ ಆಸೀಫ್​ ಸೇಠ್ ಮಾತನಾಡಿ, ಬಿಜೆಪಿ‌ ನೇಹಾ ಹತ್ಯೆ ಪ್ರಕರಣದಲ್ಲಿ ರಾಜಕೀಯ ಮಾಡಬಾರದು. ಅವರ ಕುಟುಂಬಸ್ಥರು ಯಾವ ಪರಿಸ್ಥಿತಿಯಲ್ಲಿದ್ದಾರೆ ಎನ್ನುವುದನ್ನು ಗಮನಿಸಬೇಕು. ನೇಹಾ ಸಾವಿಗೆ ನ್ಯಾಯ ಸಿಗಬೇಕು. ಕೊಲೆ ಮಾಡಿದ ಆರೋಪಿಗೆ ಶಿಕ್ಷೆ ಆಗಬೇಕು. ಕೊಲೆ ಮಾಡುವವರು ಥರ್ಡ್ ಕ್ಲಾಸ್ ಕ್ರಿಮಿನಲ್ ಮನಸ್ಥಿತಿಯವರು. ಎಲ್ಲರ ವಿರುದ್ಧ ಕ್ರಮ ಆಗಲಿ. ಈಗ ನಾವು ಪ್ರತಿಭಟನೆ ಮಾಡ್ತಿಲ್ಲ.

ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮನವಿ ಮಾಡುತ್ತಿದ್ದೇವೆ. ಸಾವಿನಲ್ಲಿ ರಾಜಕೀಯ ನಾವು ಮಾಡ್ತಿಲ್ಲ. ಯಾವುದೇ ಧರ್ಮ, ಜಾತಿ ಏನೇ ಇರಲಿ ಅವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಲಿ ಎಂದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ್ ನಾವಲಗಟ್ಟಿ, ಮುಖಂಡರಾದ ಆರ್.ಪಿ.ಪಾಟೀಲ, ಪ್ರದೀಪ ಜೆ. ಸೇರಿದಂತೆ ಮತ್ತಿತರರು ಇದ್ದರು.

ಫ್ರೆಶ್ ನ್ಯೂಸ್

Latest Posts

Featured Videos