ಕಾಂಗ್ರೆಸ್‌ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ: ಅಶೋಕ್

ಕಾಂಗ್ರೆಸ್‌ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ: ಅಶೋಕ್

ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ನಡೆದಿರುವ ಕೋಮುಗಲಭೆ ಇದೀಗ ರಾಜ್ಯ ರಾಜಕೀಯದಲ್ಲಿ ಕಿಡಿ ಹೊತ್ತಿಸಿದ್ದು, ಇದರ ಬಗ್ಗೆ ವಿರೋಧ ಪಕ್ಷದ ನಾಯಕರಾಗಿರುವಂತಹ ಆರ್ ಅಶೋಕ್ ಅವರು ಮಾತನಾಡಿ, ಮಸೀದಿ, ದರ್ಗಾ ಮುಂದೆ ಗಣೇಶೋತ್ಸವ ಮೆರವಣಿಗೆ ಮಾಡಬಾರದು ಎಂದು ಹೇಳುವುದಕ್ಕೆ ಕರ್ನಾಟಕ ಏನು ಇಸ್ಲಾಮಿಕ್ ರಿಪಬ್ಲಿಕ್ ಆಗಿದೆಯಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ:

ಈ ಕುರಿತಂತೆ ಎಕ್ಸ್ ಕಥೆಯಲ್ಲಿ ಪೋಸ್ಟ್ ಹಾಕಿರುವ ಅವರು, ಗೃಹ ಸಚಿವರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದ ಹೇಳಿಕೆಗಳನ್ನು ಗಮನಿಸಿದರೆ ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

ಇದೊಂದು ಆಕಸ್ಮಿಕ ಘಟನೆ, ಸಣ್ಣ ಘಟನೆ ಎಂದು ತಿಪ್ಪೆ ಸಾರಿಸುವ ಮಾತಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಮುಸ್ಲಿಂ ಮತಾಂಧರನ್ನ ಓಲೈಕೆ ಮಾಡಲು, ಹಿಂದೂಗಳನ್ನು ಬಲಿಕೊಡಲೂ ಸಿದ್ಧ ಎಂದು ನಿರ್ಧಾರ ಮಾಡಿದಂತಿದೆ. ನಾಗಮಂಗಲದ ಘಟನೆಯಿಂದ ಹೀಗಾದರೆ ನಮ್ಮ ಗತಿ ಏನು ಎಂದು ಇಡೀ ಹಿಂದೂ ಸಮಾಜ ಆತಂಕಗೊಂಡಿದೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos