ಕಾಂಗ್ರೆಸ್ ಸೇರಿದ ಬಿಜೆಪಿ ಅಧ್ಯಕ್ಷ ಯೋಗಾ ರಮೇಶ್

ಕಾಂಗ್ರೆಸ್ ಸೇರಿದ ಬಿಜೆಪಿ ಅಧ್ಯಕ್ಷ ಯೋಗಾ ರಮೇಶ್

ಹಾಸನ, ಮಾ. 28, ನ್ಯೂಸ್ ಎಕ್ಸ್ ಪ್ರೆಸ್: ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಯೋಗಾ ರಮೇಶ್ ಅವರು ಕಾಂಗ್ರೆಸ್ ಸೇರಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷದ ಧ್ವಜ ನೀಡುವ ಮೂಲಕ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಮಾ. 19ರಂದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಯೋಗಾ ರಮೇಶ್ ಅವರು ಕಾಂಗ್ರೆಸ್ ಸೇರುವಂತೆ ಮಾತುಕತೆ ನಡೆಸಿದ್ದರು. ಮಾಜಿ ಸಚಿವ ಎ.ಮಂಜು ಅವರು ಬಿಜೆಪಿ ಸೇರಿದ ಬಳಿಕ ಯೋಗಾ ರಮೇಶ್ ಅವರು ಅಸಮಾಧಾನಗೊಂಡಿದ್ದರು.

ಹಾಸನ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಎ.ಮಂಜು ಅವರು ಬಿಜೆಪಿ ಸೇರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈಗ ಎ.ಮಂಜು, ಯೋಗಾ ರಮೇಶ್ ಅವರು ಪಕ್ಷ ಬದಲಾಯಿಸಿದ್ದರಿಂದ ಲೋಕಸಭಾ ಚುನಾವಣೆಯಲ್ಲಿ ಏನಾಗಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos