ಕಾಂಗ್ರೆಸ್ ಭರ್ಜರಿ ಗೆಲುವು, ಬಿಜೆಪಿಗೆ ಹಿನ್ನಡೆ

ಕಾಂಗ್ರೆಸ್ ಭರ್ಜರಿ ಗೆಲುವು, ಬಿಜೆಪಿಗೆ ಹಿನ್ನಡೆ

ಜೈಪುರ್: ಇತ್ತೀಚೆಗೆ ನಡೆದ ರಾಜಸ್ಥಾನದ ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನ್ನು ಅನುಭವಿಸುವ ಮೂಲಕ ಮುಖಭಂಗ ಅನುಭವಿಸಿತ್ತು. ಏತನ್ಮಧ್ಯೆ ಭಾನುವಾರ(ಡಿಸೆಂಬರ್ 13, 2020)ನಡೆದ ಸ್ಥಳೀಯ ನಗರ ಸಂಸ್ಥೆ (ಯುಎಲ್‌ಬಿ) ಚುನಾವಣೆಯಲ್ಲಿ 619 ವಾರ್ಡ್ಗಳಲ್ಲಿ ಗೆಲುವು ಸಾಧಿಸಿದ್ದು, ಇದರೊಂದಿಗೆ ಬಿಜೆಪಿಯನ್ನು ಸೋಲಿಸಿದೆ ಎಂದು ವರದಿ ತಿಳಿಸಿದೆ.
ಭಾನುವಾರ ಘೋಷಣೆಯಾದ ಫಲಿತಾಂಶದ ಪ್ರಕಾರ 12 ಜಿಲ್ಲಗಳ 50 ಸ್ಥಳೀಯ ನಗರ ಸಂಸ್ಥೆಯ 1,775 ವಾರ್ಡ್ಸ್ ಗಳಿಗೆ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ 619 ವಾರ್ಡ್ ಗಳಲ್ಲಿ ಮತ್ತು ಬಿಜೆಪಿ 548 ವಾರ್ಡ್ ಗಳಲ್ಲಿ ಜಯ ಸಾಧಿಸಿದೆ.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 596 ವಾರ್ಡ್ ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಬಹುಜನ್ ಸಮಾಜ ಪಕ್ಷದ ಸದಸ್ಯರು 7 ವಾರ್ಡ್ ಗಳಲ್ಲಿ ಗೆಲುವು ಸಾಧಿಸಿರುವುದಾಗಿ ವರದಿ ತಿಳಿಸಿದೆ.
ಇತ್ತೀಚೆಗೆ ನಡೆದ ಪಂಚಾಯತ್ ರಾಜ್ ಚುನಾವಣೆಯಲ್ಲಿ ಬಿಜೆಪಿ 12 ಜಿಲ್ಲಾ ಪರಿಷತ್ ನಲ್ಲಿ ಗೆದ್ದಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಕೇವಲ ಐದು ಜಿಲ್ಲಾ ಪರಿಷತ್ ನಲ್ಲಿ ಜಯಗಳಿಸುವ ಮೂಲಕ ಮುಖಭಂಗ ಅನುಭವಿಸಿತ್ತು.
ಸ್ಥಳೀಯ ನಗರ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಪ್ರದರ್ಶನ ತೋರಿದ್ದು, ಹೆಚ್ಚು ಸ್ಥಾನ ಗಳಿಸಿರುವುದು ಸಂತೋಷ ತಂದಿದೆ ಎಂದು ರಾಜಸ್ಥಾನ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಗೋವಿಂದ್ ಸಿಂಗ್ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ ತಿಳಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos