ರಸ್ತೆ ಗುಂಡಿ ಮುಚ್ಚಲು ಕಾಂಗ್ರೆಸ್ ವತಿಯಿಂದ ಒತ್ತಾಯ

ರಸ್ತೆ ಗುಂಡಿ ಮುಚ್ಚಲು ಕಾಂಗ್ರೆಸ್ ವತಿಯಿಂದ ಒತ್ತಾಯ

ಚಿಕ್ಕಮಗಳೂರು, ಡಿ. 3: ನಗರದ ರಸ್ತೆಗಳ ಗುಂಡಿ ಮುಚ್ಚುವಂತೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂದು  ಪ್ರತಿಭಟನೆ ನಡೆಸಲಾಯಿತು.

ದೀಪಾ ನರ್ಸಿಂಗ್ ಹೋಂ ಬಳಿಯಿಂದ ಬೈಪಾಸ್ ರಸ್ತೆಗೆ ಸಂಪರ್ಕಿಸುವ ರಸ್ತೆಯಲ್ಲಿನ ದೊಡ್ಡಗುಂಡಿ ಬಳಿ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ವಿರುದ್ಧ ಘೋಷಣೆ ಕೂಗಿದರು.

ನಗರದ ಎಲ್ಲ ರಸ್ತೆಗಳು ಗುಂಡಿ, ಹೊಂಡಗಳಿಂದ ಕೂಡಿವೆ. ಮಳೆಯಿಂದಾಗಿ ಹೊಂಡಗಳಲ್ಲಿ ಕೆಸರು ನಿರ್ಮಾಣವಾಗಿದೆ. ಗುಂಡಿಗಳ ನಡುವೆ ರಸ್ತೆ ಹುಡುಕುವ ಪರಿಸ್ಥಿತಿ ಇದೆ. ವಾಹನ ಸವಾರರು ಸಂಚರಿಸಲು ಹೈರಾಣುಗುತ್ತಿದ್ದಾರೆ . ರಸ್ತೆ ದುರಸ್ತಿಗೆ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ ವಹಿಸಿದ್ದಾರೆ ಎಂದು ದೂರಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಮಾತನಾಡಿ, ದಂಟರಮಕ್ಕಿಯ ಬಳಿ ರಸ್ತೆಯ ಗುಂಡಿಗೆ ಇತ್ತೀಚೆಗೆ ಆಯತಪ್ಪಿ ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟಿದ್ದರು. ಅದನ್ನು ಖಂಡಿಸಿ ವಿವಿಧ ಪಕ್ಷ, ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಆದರೂ ಜಿಲ್ಲಾಉಸ್ತುವಾರಿ ಸಚಿವ ಸಿ.ಟಿ.ರವಿ ಅವರು ರಸ್ತೆ ದುರಸ್ತಿಗೆ ಕ್ರಮ ವಹಿಸಿಲ್ಲ. ಉಪಚುನಾವಣೆ ಪ್ರಚಾರದಲ್ಲಿ ನಿರತರಾಗಿದ್ದಾರೆ. ಜಿಲ್ಲೆಯ ಅಭಿವೃದ್ಧಿ ಕಡೆಗಣಿಸಿದ್ದಾರೆ ಎಂದು ದೂಷಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos