ಸಂವಿಧಾನ ಸಮರ್ಪಣಾ ದಿನಾಚರಣೆ

ಸಂವಿಧಾನ ಸಮರ್ಪಣಾ ದಿನಾಚರಣೆ

ಕೋಲಾರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಆಶಯಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡು ಶಿಕ್ಷಣ, ಸಂಘಟನೆ, ಹೋರಟದ ಮುಖಾಂತರ ತಮ್ಮ ಹಕ್ಕು ಮತ್ತು ಕರ್ತವ್ಯಗಳಿಗೆ ಸದಾ ಸಿದ್ಧರಾಗಿರಬೇಕೆಂದು ಪೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಡಾ.ಎಂ ಚಂದ್ರಶೇಖರ್ ಕರೆ ನೀಡಿದರು.

ಬಂಗಾರಪೇಟೆ ತಾಲೂಕಿನ ಹಂಚಾಳ ಗೇಟ್‌ನಲ್ಲಿರುವ ಪೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರೀಯ ಸಂವಿಧಾನದ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸಂವಿಧಾನ ಸಮರ್ಪಣಾ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಸಂವಿಧಾನದಲ್ಲಿ ಅಡಕವಾಗಿರುವ ಮೂಲಭೂತ ಕಾನೂನುಗಳ ಬಗ್ಗೆ ವಿವರವಾಗಿ ತಿಳಿಸಿದರು. ಮಹಿಳೆಯರ ಆಸ್ತಿ ಹಕ್ಕು ಹಿಂದೂ ಬಿಲ್ ಕೋಡ್ ವಿಚಾರವಾಗಿ ಕಾನೂನು ಮಂತ್ರಿ ಪದವಿಗೆ ರಾಜಿನಾಮೆ ನೀಡಿ ಕೇಂದ್ರ ಸಚಿವ ಸಂಪುಟದಿಂದ ಹೊರಬಂದು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟವನ್ನು ಮಾಡಿದರು. ಯಾವುದೇ ಒಂದು ವರ್ಗಕ್ಕೆ ಸೀಮಿತವಾಗದೆ ಎಲ್ಲಾ ವರ್ಗದವರ ಆಶಾ ಕಿರಣವಾದರು.

ಫ್ರೆಶ್ ನ್ಯೂಸ್

Latest Posts

Featured Videos