ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ ಖಚಿತ

ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ ಖಚಿತ

ಬೆಂಗಳೂರು: ಕರ್ನಾಟಕದಲ್ಲಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ. ಹಾಸನ, ಕೋಲಾರ ಮತ್ತು ಮಂಡ್ಯ ಕ್ಷೇತ್ರಗಳಲ್ಲಿ ಜೆಡಿಎಸ್​ ಸ್ಪರ್ಧಿಸಲಿದೆ.

ಕಳೆದ ಚುನಾವಣೆಯಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲುಕಂಡಿದ್ದರು. ಆದ್ರೆ, ಈ ಬಾರಿ ಸ್ವತಃ ಕುಮಾರಸ್ವಾಮಿ ಕಣಕ್ಕಿಳಿಯುತ್ತಿರುವುದು ಈ ಬಾರಿ ಮತ್ತೆ ಮಂಡ್ಯ ಲೋಕಸಭಾ ಕ್ಷೇತ್ರ ಭಾರೀ ಸದ್ದು ಮಾಡುವುದಂತೂ ಸತ್ಯ. ಆದ್ರೆ, ಹಾಲಿ ಸಂಸದೆ ಸುಮಲತಾ ಅಂಬರೀಶ್ ನಡೆ ಏನು ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.

ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಇನ್ನೂ ಅಧಿಕೃತವಾಗಿ ಮಂಡ್ಯ ಸೇರಿದಂತೆ ಕೋಲಾರ, ಹಾಸನ ಲೋಕಸಭಾ ಕ್ಷೇತ್ರಗಳಿಗೆ ಜೆಡಿಎಸ್​ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಆದರೂ ಯಾರ್ಯಾರು ಸ್ಪರ್ಧಿಸುತ್ತಾರೆ ಎನ್ನುವುದು ಅಂತಿಮವಾಗಿದೆ. ಅದರಂತೆ ಮಂಡ್ಯದಿಂದ ಕುಮಾರಸ್ವಾಮಿ ಕಣಕ್ಕಿಳಿಯಲಿದ್ದು, ಏಪ್ರಿಲ್.4ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಾರಿಯೂ ಸಹ ಮಂಡ್ಯ ಲೋಕಸಭಾ ಚುನಾವಣೆ ರಂಗೇರಲಿದೆ.

 

ಫ್ರೆಶ್ ನ್ಯೂಸ್

Latest Posts

Featured Videos