ಬೆಂಗಳೂರು: ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಇಂದು (ಸೋಮವಾರ ಸೆಪ್ಟೆಂಬರ್ 09) ರಂದು ಆದೇಶ ಹೊರಡಿಸಿದೆ.
ಇನ್ನು ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ಸೆ.12ರ ವರೆಗೆ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಇದನ್ನೂ ಓದಿ: ಬಳ್ಳಾರಿ ಜೈಲಿನಲ್ಲಿ ದಾಸನಿಗೆ ಸಿಕ್ತು ಈ ವ್ಯವಸ್ಥೆ
ಇಂದಿನ ವಿಚಾರಣೆಗೆ ನಟ ದರ್ಶನ್ ಅವರು ಬಳ್ಳಾರಿ ಜೈಲಿನಿಂದ, ಪವಿತ್ರಾ ಗೌಡ ಬೆಂಗಳೂರು ಕೇಂದ್ರ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದರು. ಅದೇ ರೀತಿ ಈ ಪ್ರಕರಣದಲ್ಲಿ ಬೇರೆ ಬೇರೆ ಜೈಲು ಸೇರಿರುವ ಎಲ್ಲರೂ ವಿಚಾರಣೆ ಎದುರಿಸಿದರು.