ಬಿಜೆಪಿ ಜೆಡಿಎಸ್‌ ಸಮನ್ವಯ ಸಭೆ

ಬಿಜೆಪಿ ಜೆಡಿಎಸ್‌ ಸಮನ್ವಯ ಸಭೆ

ಬೆಂಗಳೂರು: ಬಿಜೆಪಿ ಜೆಡಿಎಸ್‌ ಮೈತ್ರಿಯಲ್ಲೂ ಇದೇ ಬಹುದೊಡ್ಡ ಸವಾಲಾಗಿದೆ. ಇದನ್ನು ಹೇಗೆ ಎದುರಿಸುವುದು ಎಂಬ ನಿಟ್ಟಿನಲ್ಲಿಯೂ ಎರಡು ಪಕ್ಷಗಳ ನಾಯಕರು ಚರ್ಚೆ ನಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ನಡೆಯುವ ಸಮನ್ವಯ ಸಮಿತಿ ಸಭೆಯಲ್ಲೂ ಈ ವಿಚಾರವಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರನ್ನು ವಿಶ್ವಾಸನಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಎರಡನೇ ಹಂತದ ನಾಯಕರಿಗೆ ಸೂಚನೆಗಳನ್ನು ನೀಡುವ ಕುರಿತಾಗಿಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಮೈತ್ರಿಯಲ್ಲಿ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಮನ್ವಯ ಸಮಿತಿ ಸಭೆ ನಡೆಯಲಿದೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿರುವ ಈ ಸಭೆಯಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಎರಡು ಪಕ್ಷಗಳ ಪ್ರಮುಖರು ಭಾಗಿಯಾಗಿ ಚರ್ಚೆ ನಡೆಸಲಿದ್ದಾರೆ. ಈ ನಿಟ್ಟಿನಲ್ಲಿ ಇಂದಿನ ಸಭೆ ಮಹತ್ವ ಪಡೆದುಕೊಂಡಿದೆ. ಈಗಾಗಲೇ ಟಿಕೆಟ್‌ ಹಂಚಿಕೆ ಫೈನಲ್ ಆಗಿದ್ದು, ಇನ್ನೇನಿದ್ದರೂ ಸೋಲು ಗೆಲುವಿನ ಲೆಕ್ಕಾಚಾರವಾಗಿದೆ. ಈ ನಿಟ್ಟಿನಲ್ಲಿ ಪ್ರಚಾರಕ್ಕೆ ಹೆಚ್ಚಿನ ಆದ್ಯತೆ ನೀಡಲು ಎರಡು ಪಕ್ಷಗಳು ನಿರ್ಧಾರ ಮಾಡಿವೆ.

ಇನ್ನು ರಾಜ್ಯದ ಹಲವು ಕ್ಷೇತ್ರಗಳಲ್ಲಿ ಎರಡು ಪಕ್ಷದ ನಾಯಕರು ಜಂಟಿ ಪ್ರಚಾರ ನಡೆಸುವ ನಿಟ್ಟಿನಲ್ಲಿಯೂ ತಂತ್ರಗಾರಿಕೆಗಳು ನಡೆಯುತ್ತಿವೆ. ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹಾಗೂ ಎಚ್‌ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಜೊತೆಯಾಗಿ ಪ್ರಚಾರ ನಡೆಸುವ ನಿಟ್ಟಿನಲ್ಲಿ ಎರಡು ಪಕ್ಷಗಳ ನಡುವೆ ಮಾತುಕತೆ ನಡೆಯುತ್ತಿವೆ.

 

 

 

ಫ್ರೆಶ್ ನ್ಯೂಸ್

Latest Posts

Featured Videos