ಕೊತ್ತಂಬರಿ ಬೀಜದ ನೀರು ಸೇವನೆಯಿಂದ ಆಗುವ ಪ್ರಯೋಜನಗಳು

ಕೊತ್ತಂಬರಿ ಬೀಜದ ನೀರು ಸೇವನೆಯಿಂದ ಆಗುವ ಪ್ರಯೋಜನಗಳು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ತುಂಬಾ ಕಷ್ಟಕರವಾಗಿದೆ. ನಾವು ದಿನ ನಿತ್ಯ ಬಳಸುವಂತಹ ಪದಾರ್ಥಗಳಲ್ಲಿ ನಮ್ಮ ಆರೋಗ್ಯ ಆಡಗಿದೆ, ಆದರೆ ನಾವು ಅದನ್ನು ಯಾವ ರೀತಿ ಬಳಸಬೇಕೆಂದು ಯಾರಿಗೂ ಸಹ ತಿಳಿದಿರುವುದಿಲ್ಲ, ಆದ್ದರಿಂದ ನಮ್ಮ ಮನೆಯಲ್ಲಿ ಸಿಗುವಂತಹ ಪದಾರ್ಥಗಳಲ್ಲಿ ನಮ್ಮ ಆರೋಗ್ಯ ಆಡಗಿದೆ ಅದನ್ನು ನಾವು ಸರಿಯಾಗಿ ಬಳಸುವುದರಿಂದ ನಮ್ಮ ಆರೋಗ್ಯ ಸಹ ವೃದ್ಧಿಯಾಗುತ್ತದೆ. ಕೊತ್ತಂಬರಿ ಬೀಜದ ನೀರನ್ನು ಸೇವಿಸುವುದರಿಂದ ನಮ್ಮ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು.

ಮಸಾಲೆ ಪದಾರ್ಥವಾಗಿ ಮಾತ್ರವಲ್ಲದೆ ಕೊತ್ತಂಬರಿ ಬೀಜ ಅನೇಕ ಇತರೆ ಆರೋಗ್ಯ ಪ್ರಯೋಜನಗಳನ್ನು ಕೂಡ ಹೊಂದಿದೆ. ಕೊತ್ತಂಬರಿ ಬಹಳ ಹಳೆಯ ಮೂಲಿಕೆಯಾಗಿದ್ದು, ಇದು ಕ್ರಿ.ಪೂ. 5000ರಷ್ಟು ಹಿಂದೆಯೇ ಪರಿಚಿತವಾಗಿದೆ. ಇದನ್ನು ಮೊದಲು ಇಟಲಿಯಲ್ಲಿ ಬಳಸಲಾಯಿತು. ಭಾರತದ ಅಡುಗೆಯಲ್ಲಿ ಹೆಚ್ಚು ಬಳಸುವ ಕೊತ್ತಂಬರಿಭಾರತದ ಮೂಲದ್ದೇ ಅಲ್ಲ. ಕೊತ್ತಂಬರಿ ಬೀಜವನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಗ್ಗೆ ಆ ನೀರನ್ನು ಕುಡಿಯುವುದರಿಂದ ಆರೋಗ್ಯಕ್ಕೆ ತುಂಬಾ ಉತ್ತಮ.

ಥೈರಾಯ್ಡ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕೊತ್ತಂಬರಿ ನೀರನ್ನು ಸೇವಿಸುವ ಮೂಲಕ ಥೈರಾಯ್ಡ್ ಸಮಸ್ಯೆಗಳನ್ನು ಸುಧಾರಿಸಬಹುದು. ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ. ಕೊತ್ತಂಬರಿ ಬೀಜಗಳು ಜೀರ್ಣಕ್ರಿಯೆಗೆ ಸಹಾಯ ಮಾಡುವ ಸಾಮರ್ಥ್ಯ ಹೊಂದಿದೆ.

ಕೆಲವು ಸಂಶೋಧನೆಗಳ ಪ್ರಕಾರ, ಕೊತ್ತಂಬರಿ ಬೀಜಗಳು ಹೈಪೊಗ್ಲಿಸಿಮಿಕ್ ಗುಣಲಕ್ಷಣಗಳನ್ನು ಹೊಂದುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಕೊತ್ತಂಬರಿ ಬೀಜದ ನೀರನ್ನು ನಿಯಮಿತವಾಗಿ ಕುಡಿಯುವುದರಿಂದ ಮಧುಮೇಹಿಗಳಿಗೆ ಸಾಕಷ್ಟು ಪ್ರಯೋಜನಗಳಿವೆ.

ಕೊತ್ತಂಬರಿ ಬೀಜಗಳಲ್ಲಿ ಕಂಡುಬರುವ ಉರಿಯೂತದ ರಾಸಾಯನಿಕಗಳು ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಸಾಧ್ಯವಾಗುತ್ತದೆ. ಆಗಾಗ ಇದನ್ನು ಸೇವನೆ ಮಾಡುವುದರಿಂದ ಉರಿಯೂತದ ಸಮಸ್ಯೆಗಳಿರುವ ಜನರಿಗೆ ಸಹಾಯವಾಗುತ್ತದೆ. ಕೊತ್ತಂಬರಿ ಬೀಜದ ನೀರನ್ನು ಒಳಗೊಂಡಿರುವ ಸಮತೋಲಿತ ಆಹಾರವು ತೂಕ ಇಳಿಸಲು ಸಹಾಯ ಮಾಡುತ್ತದೆ.

ಕೊತ್ತಂಬರಿ ಬೀಜ ಮುಟ್ಟಿನ ಸಮಯದಲ್ಲಿ ಉಂಟಾಗುವ ನೋವನ್ನು ನಿವಾರಿಸುತ್ತದೆ. ಮುಟ್ಟಿನ ಸಮಯದಲ್ಲಿ ಕೊತ್ತಂಬರಿ ಬೀಜದ ನೀರನ್ನು ಸೇವಿಸುವುದರಿಂದ ಹೊಟ್ಟೆ ನೋವು ಮತ್ತು ಹೊಟ್ಟೆಯ ಸೆಳೆತವನ್ನು ಕಡಿಮೆ ಮಾಡಬಹುದು.

ಕೊತ್ತಂಬರಿ ಬೀಜ ಚರ್ಮದ ಆರೋಗ್ಯವನ್ನು ಉತ್ತೇಜಿಸುತ್ತದೆ. ಕೊತ್ತಂಬರಿ ಬೀಜಗಳ ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳು ಆರೋಗ್ಯಕರ ಚರ್ಮವನ್ನು ನೀಡುತ್ತವೆ. ಕೊತ್ತಂಬರಿ ಬೀಜದ ನೀರನ್ನು ನಿಯಮಿತವಾಗಿ ಸೇವಿಸುವುದರಿಂದ ಚರ್ಮದ ಸಮಸ್ಯೆಗಳ ಚಿಕಿತ್ಸೆಯಲ್ಲಿ ಸಹಾಯ ಮಾಡುತ್ತದೆ. ಇದು ಹೊಳೆಯುವ ಮೈಬಣ್ಣವನ್ನು ನೀಡುತ್ತದೆ.

 

ಫ್ರೆಶ್ ನ್ಯೂಸ್

Latest Posts

Featured Videos