ರಾಜ್ಯದಲ್ಲಿ ಕೊರೋನಾ ಏರಿಕೆ

ರಾಜ್ಯದಲ್ಲಿ ಕೊರೋನಾ ಏರಿಕೆ

ಬೆಂಗಳೂರು: ಕೊರೋನಾ ಎರಡನೇ ಅಲೆ ನಂತರ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು ಬುಧವಾರ 1298 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 29,31,827ಕ್ಕೆ ಏರಿಕೆಯಾಗಿದೆ. ಬುಧವಾರ ಒಂದೇ ದಿನದಲ್ಲಿ ಮಹಾಮಾರಿಗೆ 32 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 37039ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಬೆಂಗಳೂರಿನಲ್ಲಿ 340 ಮಂದಿಗೆ ಸೋಂಕು ದೃಢಪಟ್ಟಿದ್ದು, ನಗರದಲ್ಲಿ ಸೋಂಕಿತರ ಸಂಖ್ಯೆ 1233512ಕ್ಕೆ ಏರಿಕೆಯಾಗಿದೆ. ಸೋಂಕು ಹೆಚ್ಚಳವಾದರೂ ಮರಣ ಪ್ರಮಾಣ ಇಳಿಕೆಯಾಗಿದ್ದು, ಇಂದು ನಗರದಲ್ಲಿ ಒಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 1833 ಸೋಂಕಿತರು ಗುಣಮುಖರಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,73,281ಕ್ಕೆ ಏರಿಕೆಯಾಗಿದೆ. ಇನ್ನು 21481 ಸಕ್ರೀಯ ಪ್ರಕರಣಗಳಿವೆ.

ಫ್ರೆಶ್ ನ್ಯೂಸ್

Latest Posts

Featured Videos