ರಾಜ್ಯದಲ್ಲಿ ಮತ್ತೊಬ್ಬ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಶಂಕೆ

ರಾಜ್ಯದಲ್ಲಿ ಮತ್ತೊಬ್ಬ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಶಂಕೆ

ಬೆಂಗಳೂರು, ಮಾ. 14: ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ಆತಂಕ ತಂದೊಡ್ಡಿದ್ದು, ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಇಂದಿನಿಂದ 1 ವಾರಗಳ ಕಾಲ ರಾಜ್ಯದಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಈ ಮಧ್ಯೆ, ಸಿಲಿಕಾನ ಸಿಟಿಯಲ್ಲಿಂದು  ಮತ್ತೊಬ್ಬ ವ್ಯಕ್ತಿಯಲ್ಲಿ ಕೊರೊನಾ ಸೋಂಕಿನ ಲಕ್ಷಣ ಕಂಡುಬಂದಿದ್ದು, ಅವರನ್ನು ರಾಜೀವ್ ಗಾಂಧಿ ಎದೆರೋಗಿಗಳ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ ಅಮೆರಿಕಾದಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಬಂದಿದ್ದ ವ್ಯಕ್ತಿಯಲ್ಲಿ ಕೊರೊನಾ ಸೋಂಕಿನ ಲಕ್ಷಣ ಪತ್ತೆಯಾಗಿದೆ. ಥರ್ಮಲ್ ಸ್ಕ್ಯಾನಿಂಗ್ ವೇಳೆ ಅವರಲ್ಲಿ ಜ್ವರ ಹಾಗೂ ಕೊರೊನಾ ಸೋಂಕು ಲಕ್ಷಣ ಪತ್ತೆಯಾಗಿದ್ದು, ಕೂಡಲೇ ಅವರನ್ನು 108 ಆಂಬುಲೆನ್ಸ್ ಮೂಲಕ ರಾಜೀವ್ ಗಾಂಧಿ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ. ವೈದ್ಯರು ಶಂಕಿತ ವ್ಯಕ್ತಿಯ ಕಫ ಹಾಗೂ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನಿಸಿದ್ದು, ವ್ಯಕ್ತಿಗೆ ಐಸೋಲೇಟೆಡ್ ವಾರ್ಡ್ ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

 

ಫ್ರೆಶ್ ನ್ಯೂಸ್

Latest Posts

Featured Videos