ಸಚಿವ ಸಂಪುಟ ಸಭೆಗೂ ಮುನ್ನಾ ನಿಗಮ-ಮಂಡಳಿ ಅಧ್ಯಕ್ಷರ ಅಂತಿಮ ಪಟ್ಟಿ!

ಸಚಿವ ಸಂಪುಟ ಸಭೆಗೂ ಮುನ್ನಾ ನಿಗಮ-ಮಂಡಳಿ ಅಧ್ಯಕ್ಷರ ಅಂತಿಮ ಪಟ್ಟಿ!

ಬೆಂಗಳೂರು:  ಇಗಾಗಲೇ ನಿಗಮ ಮಂಡಳಿಯ ಆಯ್ಕೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ. 32 ಶಾಸಕರ ಹೆಸರನ್ನು ಫೈನಲ್ ಮಾಡಲಾಗಿದೆ ಎಂದ ಸಿಎಂ ಹಾಗೂ ಡಿಸಿಎಂ. ಮೊದಲ ಹಂತದಲ್ಲಿ ಶಾಸಕರಿಗೆ ಸ್ಥಾನ ನೀಡುವುದಕ್ಕೆ ಸರ್ಕಾರ ನಿರ್ಧಾರವಾಗಿದೆ. ಮೂರು ಬಾರಿ ಹಾಗೂ ಮೂರು ಬಾರಿ ಹೆಚ್ಚಿಗೆ ಗೆದ್ದಂತವರಿಗೆ ಮೊದಲ ಆದ್ಯತೆ ನೀಡಲಾಗಿದೆ.

ಈಗಾಗಲೇ ನಿಗಮ ಮಂಡಳಿಯ ನೇಮಕಾತಿಗಾಗಿ ಹೈಕಮಾಂಡ್‌ಗೆ ಲಿಸ್ಟ್ ಕಳುಹಿಸಿದ್ದೇವೆ. ಆದಷ್ಟು ಬೇಗ ಮಂಡಳಿಗಳಿಗೆ ನೇಮಕಾತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ನವದೆಹಲಿಯಲ್ಲಿ ಮಾತನಾಡಿ, ಮೊದಲ ಹಂತದಲ್ಲಿ ಶಾಸಕರು, ಎರಡನೆಯ ಹಂತದಲ್ಲಿ ಮಾಜಿ ಶಾಸಕರು, ಬಳಿಕ ಪರಿಷತ್‌ ಸದಸ್ಯರನ್ನು ನೇಮಕ ಮಾಡಲಾಗುತ್ತದೆ. ಇನ್ನು, ಲೋಕಸಭಾ ಚುನಾವಣೆಗೂ ಮುನ್ನವೇ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗುತ್ತದೆ ಎಂದರು.

ಎಲ್ಲವೂ ನಿರೀಕ್ಷಿಸಿದಂತೆ ನಡೆದರೆ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಗೂ ಮೊದಲೇ 32 ಮಂದಿ ನಿಗಮ-ಮಂಡಳಿ ಅಧ್ಯಕ್ಷರ ಅಂತಿಮ ಪಟ್ಟಿಯೂ ಬಿಡುಗಡೆಯಾಗಲಿದೆ. ನಿಗಮ-ಮಂಡಳಿ ನೇಮಕ ಪಟ್ಟಿಗೆ ಒಪ್ಪಿಗೆ ಪಡೆದೇ ಬರುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೀಡಿರುವ ಹೇಳಿಕೆಯಿಂದ ಆಕಾಂಕ್ಷಿಗಳಲ್ಲಿ ಮತ್ತಷ್ಟು ವಿಶ್ವಾಸ ಮೂಡಿದೆ.

ಫ್ರೆಶ್ ನ್ಯೂಸ್

Latest Posts

Featured Videos