ಭ್ರಷ್ಟಾಚಾರ ನ್ಯಾಯಾಂಗ ತನಿಖೆಗೆ ಒತ್ತಾಯ

ಭ್ರಷ್ಟಾಚಾರ ನ್ಯಾಯಾಂಗ ತನಿಖೆಗೆ ಒತ್ತಾಯ

ಮಾಲೂರು: ಭೂ ಸುಧಾರಣೆ. ಎಪಿಎಂಸಿ, ಕಾರ್ಮಿಕ ಕಾಯ್ದೆ ತಿದ್ದುಪಡಿ, ನೆರೆ ಪರಿಸ್ಥಿತಿ ನಿರ್ವಹಣೆಯಲ್ಲಿ ವೈಫಲ್ಯ ಹಾಗೂ ಮಹಾಮಾರಿ ಕೊರೋನಾದಲ್ಲಿಯೂ ಭ್ರಷ್ಟಾಚಾರದಲ್ಲಿ ತೊಡಗಿ ಹೀನಾಯ ಮಟ್ಟದಲ್ಲಿ ಸರಕಾರ ನಡೆಸುತ್ತಿರುವ ಬಿಜೆಪಿ ಸರಕಾರವನ್ನು ತೊಲಗಿಸಿ. ಭ್ರಷ್ಟಾಚಾರ ವೆಸಗಿರುವವರ ವಿರುದ್ದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಶಾಸಕ ಕೆ.ವೈ.ನಂಜೇಗೌಡ ಒತ್ತಾಯಿಸಿದರು.

ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆದೇಶದ ಹಿನ್ನೆಯಲ್ಲಿ ತಾಲೂಕು ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ಮಾಡುವ ಮೂಲಕ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿ ಮಾತನಾಡಿದರು.

ಭೂ ಸುಧಾರಣೆ. ಎಪಿಎಂಸಿ, ಕಾರ್ಮಿಕ ಕಾಯ್ದೆ ತಿದ್ದುಪಡಿ, ನೆರೆ ಪರಿಸ್ಥಿತಿ ನಿರ್ವಹಣೆಯಲ್ಲಿ ವೈಫಲ್ಯ ಹಾಗೂ ಮಹಾಮಾರಿ ಕೊರೋನಾದಲ್ಲಿಯೂ ಭ್ರಷ್ಟಾಚಾರದಲ್ಲಿ ತೊಡಗಿರುವ ಕೇಂದ್ರ, ರಾಜ್ಯ ಸರಕಾರ ತೆಗೆದುಕೊಂಡ ನಿರ್ಧಾರದಿಂದ ಆಡಳಿತ ನಡೆಸುವಲ್ಲಿ ವಿಫಲವಾಗಿದೆ. ಇದರಿಂದ ದೇಶದ ಆರ್ಥಿಕ ಪರಿಸ್ಥಿತಿ ಜನ ಸಾಮಾನ್ಯರ ಜನಜೀವನ ಅಲ್ಲೊಲ್ಲ ಕಲ್ಲೋಲವಾಗಿದೆ. ಕಾಂಗ್ರೆಸ್ ಪಕ್ಷದವತಿಯಿಂದ ರಾಜ್ಯದಲ್ಲಡೆ ನಡೆಯುತ್ತಿರುವ ಪ್ರತಿಭಟನೆಗಳು ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಎಚ್ಚರಿಕೆಯ ಗಂಟೆಯಾಗಿದ್ದು, ಮುಂದಿನ ದಿನಗಳಲ್ಲಿ ಕೇಂದ್ರ, ರಾಜ್ಯ ಬಿಜೆಪಿ ಸರಕಾರವನ್ನು ತೊಲಗಿಸಬೇಕೆಂದು ಗುಡುಗಿದರು.

ದೇಶದಲ್ಲಿ  ಸ್ವಾತಂತ್ರ್ಯ ಬಂದಮೇಲೆ ದೇಶವನ್ನು ಕಟ್ಟಿ ಬೆಳೆಸಿ ಪ್ರಪಂಚದಲ್ಲಿ ಭಾರತವನ್ನು ಎತ್ತರಕ್ಕೆ ತಂದ ಪಕ್ಷ ಯಾವುದಾರೂ ಇದ್ದರೂ ಕಾಂಗ್ರೆಸ್ ಪಕ್ಷವಾಗಿದೆ. ಆಕಸ್ಮಿಕವಾಗಿ ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ದೇಶದ ಜನತೆಯನ್ನು ಆದೋಗತಿಗೆ ತಂದಿದ್ದಾರೆ.  ಸುಗ್ರೀವಾಜ್ಙೆಯ ಮೂಲಕ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ಸೇರಿದಂತೆ ಹಲವಾರು ಕಾಯ್ದೆಗಳನ್ನು ತಕ್ಷಣ ಹಿಂಪಡೆಯದಿದ್ದರೆ ದೇಶ್ಯಾದಂತ ಕಾಂಗ್ರೆಸ್ ಪಕ್ಷದಿಂದ ಉಗ್ರಹೋರಾಟ ನಡೆಸಲಾಗುವುದು  ಎಚ್ಚರಿಕೆ ನೀಡಿದರು.

 

 

ಫ್ರೆಶ್ ನ್ಯೂಸ್

Latest Posts

Featured Videos