ಭೀಕರ ಅಪಘಾತದಲ್ಲಿ ದಂಪತಿ ಸಾವು

ಭೀಕರ ಅಪಘಾತದಲ್ಲಿ ದಂಪತಿ ಸಾವು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚು ತಾನೇ ಇದೆ ಹೊರತು ಕಮ್ಮಿಯಾಗುತ್ತಾ ಇಲ್ಲ ಎಷ್ಟೇ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದರು ಸಹ ಅಪಘಾತಗಳ ಸಂಖ್ಯೆ ಏರಿಕೆಯಾಗುತ್ತಿದೆ.

ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ

ಕಾರು ಡಿಕ್ಕಿ  ಹೊಡೆದ ಪರಿಣಾಮ ಬೈಕ್​​ನಲ್ಲಿ ತೆರಳುತ್ತಿದ್ದ ದಂಪತಿ ಸಾವನ್ನಪ್ಪಿದ್ದಾರೆ. ಚಂದ್ರೇಗೌಡ(52), ಹೇಮಲತಾ (45) ಮೃತ ದಂಪತಿ. ಉದಯಪುರ ಗ್ರಾಮದಲ್ಲಿ ಮದುವೆ ಮುಗಿಸಿ ಬೈಕ್‌ನಲ್ಲಿ ಚನ್ನರಾಯಪಟ್ಟಣಕ್ಕೆ ವಾಪಾಸ್ ಆಗುತ್ತಿದ್ದ ವೇಳೆ ತಿರುವಿನಲ್ಲಿ ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದೆ.

ಡಿಕ್ಕಿ ರಭಸಕ್ಕೆ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಚನ್ನರಾಯಪಟ್ಟಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಫ್ರೆಶ್ ನ್ಯೂಸ್

Latest Posts

Featured Videos