ಕೊರೋನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ

ಕೊರೋನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ

ಪುಣೆ: 60 ವರ್ಷದ ಕೊರೋನಾ ಸೋಂಕಿತ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ಪುಣೆಯಲ್ಲಿ ನಡೆದಿದೆ.

ಮೃತ ವ್ಯಕ್ತಿ ಹಾಗೂ ಆತನ ಮಗನಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿತ್ತು. ಆದ ಕಾರಣ ಪುಣೆಯ ಕೊಂಡ್ವಾದಲ್ಲಿನ ಕ್ವಾರಂಟೈನ್ ಆಸ್ಪತ್ರೆಯಲ್ಲಿ ಇರಿಸಲಾಗಿತ್ತು.

ಈ ಘಟನೆ ಕ್ವಾರಂಟೈನ್ ಆಸ್ಪತ್ರೆಯಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ನಡೆದಿದೆ. ಆದರೆ ಆತ್ಮಹತ್ಯೆಯ ಸಮಂಜಸ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ದೇಶದಲ್ಲಿ ಮಹಾರಾಷ್ಟ್ರ ಅತಿ ಹೆಚ್ಚು ಕೊರೋನಾ ಸೋಂಕಿತರ ರಾಜ್ಯ. 2,11, 987 ಮಂದಿಯಲ್ಲಿ ಕೊರೋನಾ ಕಂಡು ಬಂದಿದೆ. 1,15,262 ಮಂದಿ ಗುಣಮುಖರಾಗಿದ್ದಾರೆ. 9,026 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಫ್ರೆಶ್ ನ್ಯೂಸ್

Latest Posts

Featured Videos