ಸಿಪಿಎಂನಿಂದ ಹೊಸಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ರಾಜಕೀಯ ಸಮಾವೇಶ

ಸಿಪಿಎಂನಿಂದ ಹೊಸಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ರಾಜಕೀಯ ಸಮಾವೇಶ

ಬೆಂಗಳೂರು, ಮಾ.30, ನ್ಯೂಸ್ ಎಕ್ಸ್ ಪ್ರೆಸ್:  ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಹೊಸಕೋಟೆ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ರಾಕೀಯ ಸಮಾವೇಶ ಇಂದು ಹೊಸಕೋಟೆಯಲ್ಲಿ ನಡೆಯಿತು.

ಸಮಾವೇಶದಲ್ಲಿ ಅಭ್ಯರ್ಥಿ ಎಸ್.ವರಲಕ್ಷ್ಮಿ ಮಾತನಾಡಿ, ಚುನಾವಣೆಯಲ್ಲಿ ರೈತರ ಸಮಸ್ಯೆಗಳ, ಕಾರ್ಮಿಕರ ಸಮಸ್ಯೆಗಳು, ವಿದ್ಯಾರ್ಥಿ-ಯುವಜನರ ಸಮಸ್ಯೆಗಳ ಬಗ್ಗೆ ಚರ್ಚೆಯಾಗುತ್ತಿಲ್ಲ. ದೇಶದಲ್ಲಿ ಜ್ವಲಂತ ಸಮಸ್ಯೆಯಾಗಿ ಕಾಡುತ್ತಿರುವ ನಿರುದ್ಯೋಗ, ಹಸಿವು, ಬಡತನದ ಬಗ್ಗೆ ಚರ್ಚೆಯಾಗುತ್ತಿಲ್ಲ. ಬದಲಾಗಿ ಜಾತಿ, ಧರ್ಮ, ಹಣದ ಬಗ್ಗೆ ಚರ್ಚೆ ನಡೆಯುತ್ತಿದೆ. ಮಾನವೀಯತೆ ಎತ್ತಿಯುಡಿಯುವವರನ್ನು ಜನರು ಇಂದು ಆಯ್ಕೆ ಮಾಡಬೇಕಾದ ತುರ್ತು ಎಂದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಮೀನಾಕ್ಷಿ ಸುಂದರಂ, ಕೆ.ಪ್ರಕಾಶ್, ವಿ.ಗೀತಾ, ಚಂದ್ರತೇಜಸ್ವಿ, ಹರೀಂದ್ರ, ಲೀಲಾವತಿ ಸೇರಿದಂತೆ ಅನೇಕ ಮುಖಂಡರು ಹಾಗೂ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos