ಇಂದು ಭಾರತ-ನ್ಯೂಜಿಲೆಂಡ್ ಮುಖಾಮುಖಿ

ಇಂದು ಭಾರತ-ನ್ಯೂಜಿಲೆಂಡ್ ಮುಖಾಮುಖಿ

ಜೂನ್, 13: ಐಸಿಸಿ ವಿಶ್ವಕಪ್ 2019 ರ ಟೂರ್ನಿಯ ಇಂದಿನ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.

ಈ ಬಾರಿಯ ವಿಶ್ವಕಪ್ ನಲ್ಲಿ ಭಾರತ ತಾನಾಡಿದ 2 ಪಂದ್ಯಗಳಲ್ಲಿ ಭರ್ಜರಿ ಗೆಲವು ಸಾಧಿಸಿದ್ದು, ಇಂದಿನ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ.

ಗಾಯಗೊಂಡಿರುವ ಹಿನ್ನೆಲೆಯಲ್ಲಿ ಶಿಖರ್ ಧವನ್ ಕನಿಷ್ಠ 3 ಪಂದ್ಯಗಳಿಂದ ಹೊರಗುಳಿಯುವಂತಾಗಿದೆ. ಅವರ ಜಾಗದಲ್ಲಿ ಕೆ.ಎಲ್. ರಾಹುಲ್ ಆರಂಭಿಕನಾಗಿ ಆಡುವುದು ಬಹುತೇಕ ಖಚಿತಗೊಂಡಿದೆ. ಹಾಗೆಯೇ 4ನೇ ಕ್ರಮಾಂಕಕ್ಕೆ ವಿಜಯ್ ಶಂಕರ್ ಮತ್ತು ದಿನೇಶ್ ಕಾರ್ತಿಕ್ ನಡುವೆ ಪೈಪೋಟಿ ಏರ್ಪಟ್ಟಿದೆ.

ಫ್ರೆಶ್ ನ್ಯೂಸ್

Latest Posts

Featured Videos