ಹಾಸನ, ಏ. 19, ನ್ಯೂಸ್ ಎಕ್ಸ್ ಪ್ರೆಸ್: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಸೋತು, ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಲೂರು ತಾಲೂಕಿನ ಬದುಕರಹಳ್ಳಿ ಗ್ರಾಮದಲ್ಲಿ ನಡೆದಿದೆ. ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಸೋತು, ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬದುಕರಹಳ್ಳಿ ಗ್ರಾಮದಲ್ಲಿ ನಡೆದಿದೆ. ಲತೇಶ್ ಕುಮಾರ್ ಮೃತ ಯುವಕ ಎಂದು ತಿಳಿದುಬಂದಿದೆ. ನಗರದ ರಾಜೀವ್ ಕಾಲೇಜ್ನಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ. ಐಪಿಎಲ್ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡಿ ಸೋಲು ಅನುಭವಿಸಿದ್ದ. ಹಣ ನೀಡುವಂತೆ ಬುಕ್ಕಿ ಪೀಡಿಸುತ್ತಿದ್ದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.3 ದಿನಗಳ ಹಿಂದೆ ವಿಷ ಕುಡಿದಿದ್ದ ಲತೇಶ್, ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾನೆ.