ಕ್ರಿಕೆಟರ್ ಆದ ನಟಿ ಯಾರು ಗೊತ್ತಾ..?

ಕ್ರಿಕೆಟರ್ ಆದ ನಟಿ ಯಾರು ಗೊತ್ತಾ..?

ಮುಂಬೈ, ಜ. 13 : ಭಾರತದ ನಾಯಕ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಅಬ್ಬರಿಸುತ್ತಿದ್ದರೇ, ಇತ್ತ ಪತ್ನಿ ಅನುಷ್ಕಾ ಶರ್ಮಾ ಬ್ಯಾಟ್ ಬಾಲ್ ಹಿಡಿದು ಫಿಲ್ಡ್ಗೆ ಇಳಿಯಲು ಸಜ್ಜಾಗಿದ್ದಾರೆ.
ಅನುಷ್ಕಾ ಶರ್ಮಾ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ದಿಗ್ಗಜ ಆಟಗಾರ್ತಿ ತಂಡದ ಮಾಜಿ ನಾಯಕಿ ಜೂಲನ್ ನಿಶಿತ್ ಗೋಸ್ವಾಮಿ ಜೀವನ ಚರಿತ್ರೆಯಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ಈಗಾಗಲೆ ಅನುಷ್ಕಾ ಸದ್ದಿಲ್ಲದೆ ಚಿತ್ರೀಕರಣ ಕೂಡ ಪ್ರಾರಂಭಿಸಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ನಲ್ಲಿ ಚಿತ್ರೀಕರಣ ಮಾಡಲಾಗುತ್ತಿದ್ದು, ಭಾರತೀಯ ಕ್ರಿಕೆಟ್ ತಂಡದ ಜರ್ಸಿ ಹಾಕಿ ಅನುಷ್ಕಾ ಫೀಲ್ಡ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರೀಕರಣ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ..

ಫ್ರೆಶ್ ನ್ಯೂಸ್

Latest Posts

Featured Videos