ಪುತ್ರಿಯ ಮೇಲೆ ಅತ್ಯಾಚಾರ ಮಾಡಿದ ತಂದೆ..!

ಪುತ್ರಿಯ ಮೇಲೆ ಅತ್ಯಾಚಾರ ಮಾಡಿದ ತಂದೆ..!

ಕಾರವಾರ, ಮಾ. 22, ನ್ಯೂಸ್ ಎಕ್ಸ್ ಪ್ರೆಸ್: 15 ವರ್ಷದ ತನ್ನ ಅಪ್ರಾಪ್ತ ಪುತ್ರಿಯ ಮೇಲೆ ತಂದೆಯೇ ಅತ್ಯಾಚಾರ ಎಸಗಿರು ಆಘಾತಕಾರಿ ಘಟನೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಮಹಮ್ಮದ್ ಉಬೇದುಲ್ಲಾ ಶೇಖ್ ಪುತ್ರಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯಾಗಿದ್ದಾನೆ. ಶಿವಮೊಗ್ಗ ರಾಗಿಗುಡ್ಡ ನಿವಾಸಿಯಾಗಿರುವ ಮೊಹಮ್ಮದ್ ಉಬೇದುಲ್ಲಾ ಪುತ್ರಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ.

ಪುತ್ರಿ ಗರ್ಭಿಣಿಯಾಗಿದ್ದು ಪತ್ನಿಗೂ ಈ ವಿಷಯ ಗೊತ್ತಾಗಿದೆ. ಉಬೇದುಲ್ಲಾ ಕೊಲೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಪತ್ನಿಕೂಡ ಸುಮ್ಮನಾಗಿದ್ದಾರೆ. ಗರ್ಭಿಣಿಯಾದ ಪುತ್ರಿ ಶಿರಸಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಅಂಗನವಾಡಿ ಕಾರ್ಯಕರ್ತೆ ಜನನ ದಾಖಲೆ ಪಡೆಯಲು ಮನೆಗೆ ಹೋದ ಸಂದರ್ಭದಲ್ಲಿ ಅಪ್ರಾಪ್ತ ಬಾಲಕಿ ಜನ್ಮ ನೀಡಿರುವುದು ಗೊತ್ತಾಗಿದೆ. ಬಾಲಕಿ ತನ್ನ ತಂದೆಯ ಕೃತ್ಯವನ್ನು ತಿಳಿಸಿ ದೂರು ನೀಡಿದ್ದಾಳೆ. ಶಿರಸಿ ಮಾರುಕಟ್ಟೆ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos