ಕೊಂಡಿಗಾಂವ್(ಛತ್ತೀಸಗಢ), ಮಾ.16, ನ್ಯೂಸ್ ಎಕ್ಸ್ ಪ್ರೆಸ್: ಇಲ್ಲಿನ ಕೊಂಡಿಗಾಂವ್‍ನ ದೂದಗಾಂವ್ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 8 ಮಂದಿ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಟ್ರಕ್-ಬೊಲೆರೊ ಮುಖಾಮುಖಿಯಾಗಿವೆ.
ಕೊಂಡಿಗಾಂವ್‍ದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ವಾಪಸ್ ಬರುತ್ತಿದ್ದಾಗ ಈ ಘಟನೆ ನಡೆದಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಆಸ್ಪತ್ರೆಗೆ ದಾಖಲು ಮಾಡಿದಾಗ ಮತ್ತೆ ನಾಲ್ವರು ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.