ಪತ್ರಿಕಾರಂಗ ಅಗಲಿದ ಕ್ರೈಂ ಗಣೇಶ್

ಪತ್ರಿಕಾರಂಗ ಅಗಲಿದ ಕ್ರೈಂ ಗಣೇಶ್

ಬೆಂಗಳೂರು: ಕ್ರೈಂ ಗಣೇಶ ಎಂದೇ ಖ್ಯಾತಿಯನ್ನು ಹೊಂದಿದ ಗಣೇಶ್ ರವರು ಕನ್ನಡ ಪ ಪತ್ರಿಕಾರಂಗದಲ್ಲಿ ಅವರದ್ದೇ ಆದ ಸುದ್ದಿಗಳನ್ನು ಮಾಡುವ ಮೂಲಕ ಪ್ರಖ್ಯಾತಿಯನ್ನು ಹೊಂದಿದ ಕ್ರೈಂ ಗಣೇಶ ಅವರು ಇದೀಗ ನಮ್ಮೆಲ್ಲರನ್ನ ಅಗಲಿ ಇಹಲೋಕ ತ್ಯಜಿಸಿದ್ದಾರೆ

ಹೌದು, ಕನ್ನಡ ಪತ್ರಿಕಾರಂಗದಲ್ಲಿ ಕ್ರೈಂ ಗಣೇಶ್‌ ಎಂದೇ ಗುರುತಿಸಿಕೊಂಡಿದ್ದ ಪತ್ರಕರ್ತ ಗಣೇಶ್‌ ಇಹ ಲೋಕ ತ್ಯಜಿಸಿದ್ದಾರೆ. ಕಳೆದ 20 ವರ್ಷಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಅನಾರೋಗ್ಯದಿಂದಾಗಿ ನಗರದ ಜೈನ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು (ಗುರುವಾರ ಅ. 10) ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಮೂಲತಃ ಮಾಗಡಿ ತಾಲೂಕಿನ ತಾಳೆಕೆರೆಯ ಗಂಗಯ್ಯ ಮತ್ತು ಕೆಂಪಮ್ಮ ದಂಪತಿ ಪುತ್ರರಾಗಿದ್ದ ಗಣೇಶ್‌ ಅವರು ಪತ್ನಿ ಪಾರ್ವತಮ್ಮ ಹಾಗೂ ಪುತ್ರನನ್ನು ಅಗಲಿದ್ದಾರೆ. ಇಂದು ಅವರ ಮೃತದೇಹವನ್ನು ತಾಳೆಕೆರೆಗೆ ಕೊಂಡೊಯ್ದು ಗುಡ್ಡೆ ರಂಗನಾಥಸ್ವಾಮಿ ಗುಡಿ ರಸ್ತೆಯಲ್ಲಿರುವ ಅವರ ಜಮೀನಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಕಸ್ತೂರಿ ಟಿವಿ ಮೂಲಕ ಕಸ್ತೂರಿ ಗಣೇಶ್‌ ಎಂದು ಪರಿಚಿತರಾಗಿದ್ದ ಗಣೇಶ್‌ ಅವರ ಕ್ರೈಂ ವರದಿಗಾರಿಕೆಯಲ್ಲಿ ನಿಪುಣರಾಗಿದ್ದರು. ಅವರ ಮಾರ್ಗದರ್ಶನದಲ್ಲಿ ಇಂದು ಹಲವಾರು ಯುವ ಪತ್ರಕರ್ತರು ಯಶಸ್ವಿ ಪತ್ರಕರ್ತರಾಗಿ ವಿವಿಧ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಕಸ್ತೂರಿ, ನ್ಯೂಸ್‌‍ 18, ಪ್ರಜಾ ಟಿವಿಗಳಲ್ಲಿ ಸೇವೆ ಸಲ್ಲಿಸಿದ್ದ ಗಣೇಶ್‌ ಅವರು ಪ್ರಸ್ತುತ ಟಿವಿ 5 ಕನ್ನಡದಲ್ಲಿ ಇನ್‌ಪುಟ್‌ ಚೀಫ್‌ ಆಗಿ ಸೇವೆ ಸಲ್ಲಿಸುತ್ತಿದ್ದರು. ಇತ್ತೀಚಿಗೆ ಪ್ರೆಸ್ ಕ್ಲಬ್ ಚುನಾವಣೆಯಲ್ಲಿ ಖಜಾಂಚಿಯಾಗಿ ಭರ್ಜರಿ ಜಯಭೇರಿ ಭಾರಿಸಿದ್ದರು ಮತ್ತುಅನನ್ಯ ಸೇವೆ ಮಾಡುತ್ತಿದ್ದರು.

ಗಣೇಶ್‌ ಅವರ ನಿಧನಕ್ಕೆ ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಪ್ರೆಸ್‌‍ ಕ್ಲಬ್‌, ಕಾರ್ಯನಿರತ ಪತ್ರಕರ್ತರ ಸಂಘ, ಬೆಂಗಳೂರು ವರದಿಗಾರರ ಕೂಟ, ಕರ್ನಾಟಕ ಮೀಡಿಯಾ ಜರ್ನಲಿಸ್ಟ್ ಯೂನಿಯನ್ ಕಂಬನಿ ಮಿಡಿದಿದೆ. ಅದೇ ರೀತಿ ಹಲವಾರು ಗಣ್ಯರು, ಹಿರಿಯ ಪೊಲೀಸ್‌‍ ಅಧಿಕಾರಿಗಳು ಗಣೇಶ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos