ಖೋಟಾ ನೋಟು ಚಲಾವಣೆಗೆ ಯತ್ನಿಸಿದ ಮೂವರ ಬಂಧನ

ಖೋಟಾ ನೋಟು ಚಲಾವಣೆಗೆ ಯತ್ನಿಸಿದ ಮೂವರ ಬಂಧನ

ತುಮಕೂರು, ಮಾ. 21, ನ್ಯೂಸ್ ಎಕ್ಸ್ ಪ್ರೆಸ್: ತುಮಕೂರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ 3 ಜನ ಯುವಕರು ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ  ಆರೋಪಿಗಳನ್ನು ತುಮಕೂರು ನಗರ ಪೊಲೀಸರು ಇಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಆಫ್ರೋಜ್, ಮಾರುತಿ, ತಮ್ಮಯ್ಯ ಅಂತ ತಿಳಿದು ಬಂದಿದ್ದು, ಬಂಧಿತ ಆರೋಪಿಗಳಿಂದ 2000 ಮುಖ ಬೆಲೆಯ 53 ಹಾಗೂ 500 ರೂ ಮುಖಬೆಲೆಯ 1 ಖೋಟಾ ನೋಟನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಪಡೆದುಕೊಳ್ಳಲಾಗಿದೆ.

ಈ 3 ಆರೋಪಿಗಳು ಖೋಟಾ ನೋಟು ಪ್ರಿಂಟ್ ಮಾಡುವ ಬಾಂಗ್ಲಾ ದೇಶಿಗರ ಸಂಪರ್ಕವನ್ನು ಹೊಂದಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos