ಇಂದು CSK vs SRH ಮುಖಾಮುಖಿ

ಇಂದು CSK vs SRH ಮುಖಾಮುಖಿ

ಬೆಂಗಳೂರು: ಐಪಿಎಲ್ 2024 ರ 18ನೇ ಪಂದ್ಯವು ಸನ್ ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಇಂದು ಹೈದರಾಬಾದ್‌’ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ಪ್ರಸ್ತುತ ಮೂರು ಪಂದ್ಯಗಳಲ್ಲಿ ಎರಡು ಗೆಲುವುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. SRH ಮೂರು ಪಂದ್ಯಗಳಿಂದ ಕೇವಲ ಒಂದು ಗೆಲುವಿನೊಂದಿಗೆ ಏಳನೇ ಸ್ಥಾನದಲ್ಲಿದೆ.

ಸನ್‌ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್‌’ನಲ್ಲಿ ಇದುವರೆಗೆ 20 ಬಾರಿ ಮುಖಾಮುಖಿಯಾಗಿದ್ದು, ಸಿಎಸ್‌ಕೆ ಮೇಲುಗೈ ಸಾಧಿಸಿದೆ. ಇದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 15 ಪಂದ್ಯಗಳನ್ನು ಗೆದ್ದಿದ್ದರೆ, ಸನ್‌ರೈಸರ್ಸ್ ಹೈದರಾಬಾದ್ ಕೇವಲ 5 ಪಂದ್ಯಗಳನ್ನು ಗೆದ್ದಿದೆ. ಇನ್ ಫಾರ್ಮ್ ವೇಗದ ಬೌಲರ್ ಮುಸ್ತಾಫಿಜುರ್ ರೆಹಮಾನ್ ಇಲ್ಲದೆ, ಚೆನ್ನೈ ಸೂಪರ್ ಕಿಂಗ್ಸ್ ಇಂದು ಐಪಿಎಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ.

 

ಫ್ರೆಶ್ ನ್ಯೂಸ್

Latest Posts

Featured Videos