ಮನೆಗೆ ತೆರಳಿ ಭಿಕ್ಷೆ ಬೇಡಿದ ಸಿ.ಟಿ ರವಿ

ಮನೆಗೆ ತೆರಳಿ ಭಿಕ್ಷೆ ಬೇಡಿದ ಸಿ.ಟಿ ರವಿ

ಚಿಕ್ಕಮಗಳೂರು, ಡಿ. 11 : ದತ್ತಾತ್ರೇಯನಿಗೆ ಮಡಿ ಹಾಗೂ ಜಾತಿಭೇದ ಇಲ್ಲ. ಹೀಗಿರುವಾಗ ಅರ್ಚಕರಲ್ಲಿ ಮಡಿ ಹಾಗೂ ಜಾತಿ ಹುಡುಕುವ ಪ್ರಶ್ನೆಯೇ ಇಲ್ಲ. ದತ್ತಾತ್ರೇಯನಿಗೆ ಯಾರೇ ಅರ್ಚಕರಾದರೂ ಸರಿ. ಆದರೆ, ಹಿಂದೂ ಅರ್ಚಕರು ನೇಮಕವಾಗಿ ದತ್ತಪೀಠದಲ್ಲಿ ಹಿಂದೂ ಪದ್ಧತಿ ಪ್ರಕಾರ ಪೂಜೆಯಾಗಬೇಕು ಅನ್ನೋದಷ್ಟೆ ನಮ್ಮ ಬೇಡಿಕೆ ಎಂದು ಮಾಲಾಧಾರಿ, ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಮಾಲಾಧಾರಿಯಾಗಿ ಚಿಕ್ಕಮಗಳೂರಿನ ನಾರಾಯಣಪುರದಲ್ಲಿ ಮನೆ-ಮನೆಗೆ ತೆರಳಿ ಭಿಕ್ಷಾಟನೆ (ಪಡಿ ಸಂಗ್ರಹ) ನಡೆಸಿ ಮಾತನಾಡಿದ ಅವರು, ಭಕ್ತಿ-ಭಾವದ ಸಮ್ಮಿಲನದೊಂದಿಗೆ ದತ್ತಪೀಠಕ್ಕೆ ಹೋಗುತ್ತಿದ್ದೇವೆ. 43 ವರ್ಷದ ಪರಿಶ್ರಮ-ಸಂಕಲ್ಪ, ಭಕ್ತಿ-ಶಕ್ತಿಯ ಆಂದೋಲನ ಅಯೋಧ್ಯೆ ಮಾದರಿಯಲ್ಲಿ ಗುರಿ ಮುಟ್ಟುವ ವಿಶ್ವಾಸ ನನಗಿದೆ. ಇದೊಂದು ನ್ಯಾಯ ಹಾಗೂ ತತ್ವಬದ್ಧವಾದ ಹೋರಾಟವಾಗಿದ್ದು, ದತ್ತಪೀಠದ ತೀರ್ಪು ನಮ್ಮಂತೆಯೇ ಬರುತ್ತದೆಂಬ ವಿಶ್ವಾಸ ವ್ಯಕ್ತಪಡಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos