ಮೊಸರು ಸೇವನೆಯಿಂದ ಏನೇನು ಲಾಭಗಳಿವೆ ಗೊತ್ತೇ..?

ಮೊಸರು ಸೇವನೆಯಿಂದ ಏನೇನು ಲಾಭಗಳಿವೆ ಗೊತ್ತೇ..?

ಪ್ರಕೃತಿ ವರವಾಗಿ ನೀಡಿರುವ ಹಲವಾರು ನೈಸರ್ಗಿಕ ಆಹಾರಗಳಲ್ಲಿ ಮೊಸರು ಕೂಡ ಒಂದು. ಮೊಸರಿನಲ್ಲಿ ಅನೇಕ ಪೋಷಕಾಂಶ ಮತ್ತು ಆರೋಗ್ಯಕ್ಕೆ ಅಗತ್ಯವಿರುವ ಅಂಶವಿದೆ. ಕೇವಲ ಆರೋಗ್ಯಕ್ಕೆ ಮಾತ್ರವಲ್ಲ, ಮೊಸರನ್ನು ಸೌಂದರ್ಯ ವೃದ್ಧಿಗೂ ಬಳಸಲಾಗುತ್ತದೆ. ಮೊಸರು ಮುಪ್ಪನ್ನು ಮುಂದೂಡುತ್ತದೆ. ದಿನಕ್ಕೆ 250 ರಿಂದ 600 ಗ್ರಾಂ ಮೊಸರು ತಿಂದರೆ ಮನುಷ್ಯ ಜೀವಮಾನ ಪೂರ್ತಿ ಆರೋಗ್ಯವಂತನಾಗಿ, ಉತ್ಸಾಹಭರಿತನಾಗಿರುತ್ತಾನೆ. ರಕ್ತದಕೊಲೆಸ್ಟರಾಲ್ ತಗ್ಗಿಸುವುದು, ಹೃದಯ ಮತ್ತು ರಕ್ತನಾಳ ವ್ಯವಸ್ಥೆಯನ್ನು ದೃಢವಾಗಿಸಬಲ್ಲದು.

ನಮ್ಮ ದೇಹ ಅತಿ ಸುಲಭವಾಗಿ ಜೀರ್ಣಿಸಿಕೊಳ್ಳುವ ಆಹಾರವೆಂದರೆ ನೀರು. ಅದು ಬಿಟ್ಟರೆ ಮೊಸರು ಅಗ್ರಸ್ಥಾನದಲ್ಲಿ ನಿಲ್ಲುತ್ತದೆ. ಏಕೆಂದರೆ ಹಾಲನ್ನು ಮೊಸರನ್ನಾಗಿಸುವ ಕ್ರಿಯೆಯಲ್ಲಿ ನಮ್ಮ ಜೀರ್ಣಾಂಗಗಳು ಮಾಡುವ ಮುಕ್ಕಾಲುಪಾಲು ಕೆಲಸವನ್ನು ಮೊಸರಿನಲ್ಲಿರುವ ಬ್ಯಾಕ್ಟೀರಿಯಾಗಳೇ ಮುಗಿಸಿರುತ್ತವೆ. ಹಾಗಾಗಿ ಮೊಸರು ನಮಗೆ ಅತ್ಯುತ್ತಮವಾದ ಆಹಾರವಾಗಿದೆ.

ಮೊಸರಿನ ಉಪಯೋಗಗಳ ಬಗ್ಗೆ ಮಾಹಿತಿ:

# ಮೊಸರಿನಲ್ಲಿನ ಕ್ಯಾಲ್ಸಿಯಂ ಮೂಳೆಗಳ ಬೆಳವಣಿಗೆಗೆ ಸಹಕಾರಿಯಾಗಿದೆ. ಮೂಳೆಗಳನ್ನು ದೃಢಗೊಳಿಸಲು ಹಾಲಿಗಿಂತಲೂ ಮೊಸರು ಉತ್ತಮ ಆಯ್ಕೆಯಾಗಿದೆ. ಏಕೆಂದರೆ ಹಾಲಿನಲ್ಲಿರುವ ಕ್ಯಾಲ್ಸಿಯಂ ಅನ್ನು ನೇರವಾಗಿ ಪಡೆದುಕೊಳ್ಳಲು ನಮ್ಮ ದೇಹಕ್ಕೆ ಸಾಧ್ಯವಿಲ್ಲ. ಇದೇ ಕಾರಣಕ್ಕೆ ಜೇನನ್ನು ಸೇರಿಸಬೇಕಾಗುತ್ತದೆ. ಆದರೆ ಮೊಸರಿನಲ್ಲಿರುವ ಕ್ಯಾಲ್ಸಿಯಂ ಅನ್ನು ಜೇನಿನ ಅಗತ್ಯವಿಲ್ಲದೇ ದೇಹ ಹೀರಿಕೊಳ್ಳಲು ಸಾಧ್ಯ.

# ಮೂಲವ್ಯಾಧಿಯ ಕಾರಣ ಆಸನಭಾಗದಲ್ಲಿ ಗಂಟುಗಳಾಗಿರುವ ವ್ಯಕ್ತಿಗಳಿಗೆ ಮೊಸರನ್ನು ನೀರಾಗಿಸಿ ಇದರಲ್ಲಿ ಕೆಲವು ನೆನೆಸಿಟ್ಟ ಪಿಸ್ತಾಗಳನ್ನು ಅರೆದು ಕುಡಿಯುವ ಮೂಲಕ ನೋವಿನಿಂದ ಮುಕ್ತಿ ದೊರಕುತ್ತದೆ.

# ಮೊಸರು ಜೀರ್ಣ ಕ್ರಿಯೆಯನ್ನು ಹೆಚ್ಚಿಸುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

# ಒಂದು ಕಪ್ ಮೊಸರಿಗೆ ಒಂದು ಚಮಚ ಜೇನುತುಪ್ಪ ಬೆರಸಿ ಸೇವಿಸಿದರೆ ಬಾಯಿಹುಣ್ಣು ನಿವಾರಣೆಯಾಗುತ್ತದೆ.

# ನಿದ್ರಾಹೀನತೆಯಿಂದ ಬಳಲುವ ವ್ಯಕ್ತಿಗಳು ರಾತ್ರಿ ಮಲಗುವ ಮುನ್ನ ಮೊಸರನ್ನು ಸೇವಿಸಿ ಮಲಗಬೇಕು.

# ದೇಹಕ್ಕೆ ಉತ್ತಮ ರೀತಿಯ ಕೊಲೆಸ್ಟ್ರಾಲ್ ನೀಡಿ, ಹೃದಯದ ಆರೋಗ್ಯಕ್ಕೆ ಹಾನಿಯಾಗುವಂಥ ಕೊಲೆಸ್ಟ್ರಾಲ್‌ಗಳನ್ನು ಕಡಿಮೆ ಮಾಡುತ್ತದೆ.

# ರಕ್ತದೊತ್ತಡವನ್ನು ಕಡಿಮೆ ಮಾಡುವ ಮೂಲಕ ಹೃದಯಾಘಾತದ ಸಂಭವವನ್ನು ತಪ್ಪಿಸುತ್ತದೆ.

# ಒಂದು ವೇಳೆ ಸತತವಾಗಿ ಬಾಯಿಯ ಹುಣ್ಣು ಅಥವಾ ಮೌಥ್ ಅಲ್ಸರ್ ನಿಂದ ಬಳಲುತ್ತಿದ್ದರೆ ರಾತ್ರಿ ಮಲಗುವ ಮುನ್ನ ಮತ್ತು ಬೆಳಿಗ್ಗೆ ಎದ್ದ ತಕ್ಷಣ ಗಟ್ಟಿ ಮೊಸರನ್ನು ಬಾಯಿಯ ಒಳಭಾಗದಲ್ಲಿ ಸವರಿಕೊಂಡರೆ ಶೀಘ್ರವೇ ಗುಣವಾಗುತ್ತದೆ.

# ಅಜೀರ್ಣದಿಂದ ಬಳಲುತ್ತಿರುವವರು ಒಂದು ಕಪ್ ಮೊಸರಿಗೆ 2 ಚಿಟಿಕೆ ಕಾಳುಮೆಣಸಿನ ಪುಡಿ, 2 ಚಿಟಿಕೆ ಜೀರಿಗೆ ಪುಡಿ ಹಾಗೂ ಒಂದು ಚಿಟಿಕೆ ಸೈಂಧಲವಣವನ್ನು ಬೆರೆಸಿ ಸೇವಿಸಿದರೆ ಅಜೀರ್ಣ ಸಮಸ್ಯೆ ನಿವಾರಣೆಯಾಗುತ್ತದೆ.

# ಕರುಳು ಹಾಗೂ ಜಠರದ ತೊಂದರೆಗಳಿಗೆ ರಾಮಬಾಣ ನಿತ್ಯವೂ ಮೊಸರನ್ನು ಆಹಾರದ ಒಂದು ಭಾಗವಾಗಿ ಸೇವಿಸುವ ವ್ಯಕ್ತಿಗಳಲ್ಲಿ ಕರುಳು ಹಾಗೂ ಜಠರದ ತೊಂದರೆಗಳು ಆವರಿಸುವ ಸಾಧ್ಯತೆ ಇತರ ವ್ಯಕ್ತಿಗಳಿಗಿಂತ ಕಡಿಮೆ ಇರುತ್ತದೆ. ಒಂದು ವೇಳೆ ಹೊಟ್ಟೆಯೊಳಗೆ ಬಿಸಿಯಾಗಿರುವಂತೆ ಅನ್ನಿಸಿದರೆ ಬಿಳಿ ಅನ್ನಕ್ಕೆ ಮೊಸರು ಕಲಸಿಕೊಂಡು ಸೇವಿಸಬೇಕು.

ದಕ್ಷಿಣ ಭಾರತದಲ್ಲಿ ಊಟದ ಕೊನೆಯಲ್ಲಿ ಮೊಸರು ಇಲ್ಲವಾದಲ್ಲಿ ಊಟ ಎಂಬುದು ಯಾವತ್ತಿಗೂ ಪರಿಪೂರ್ಣವಾಗುವುದಿಲ್ಲ. ಒಂದು ಒಳ್ಳೆಯ ಊಟಕ್ಕೆ ಉಪಸಂಹಾರ ಆಡುವುದೇ ಮೊಸರು. ಊಟದ ಕೊನೆಯಲ್ಲಿ ನೀವು ಸೇವಿಸುವ ಮೊಸರನ್ನವು ನಿಮ್ಮ ಆರೋಗ್ಯಕ್ಕೆ ಹೆಚ್ಚಿನ ಪ್ರಯೋಜನಗಳನ್ನು ನೀಡುತ್ತದೆ

ಫ್ರೆಶ್ ನ್ಯೂಸ್

Latest Posts

Featured Videos