ಕರೆಂಟ್‌ ಕಳ್ಳ ಎನ್ನುವುದನ್ನು ನಿಲ್ಲಿಸಿ ಎಂದ ಹೆಚ್‌ ಡಿ ಕೆ!

ಕರೆಂಟ್‌ ಕಳ್ಳ ಎನ್ನುವುದನ್ನು ನಿಲ್ಲಿಸಿ ಎಂದ ಹೆಚ್‌ ಡಿ ಕೆ!

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಮನೆಯ ದೀಪಾಲಂಕಾರಕ್ಕಾಗಿ ಕರೆಂಟ್ ಕಳ್ಳತನ ಮಾಡಿದ್ದಾರೆ ಎಂಬ ಆರೋಪದಿಂದ ಬೆಸ್ಕಾಂ ಅಧಿಕಾರಿಗಳು ಕುಮಾರಸ್ವಾಮಿಯವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡಿದ್ದರು.

ದೀಪಾವಳಿ ಹಬ್ಬದ ವೇಳೆ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಆರೋಪದ ಹಿನ್ನೆಲೆಯಲ್ಲಿ ಬೆಸ್ಕಾಂ ವಿಚಕ್ಷಣಾ ದಳ ವಿಧಿಸಿದ್ದ 68,526 ರು. ದಂಡವನ್ನು ಪಾವತಿ ಮಾಡಿದ್ದೇನೆ. ಇನ್ನು ಮುಂದೆ ಕರೆಂಟ್‌ ಕಳ್ಳ ಎನ್ನುವುದನ್ನು ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇದೇ ವೇಳೆ ಬೆಸ್ಕಾಂ ವಿಧಿಸಿರುವ ದಂಡದ ಮೊತ್ತ ಲೋಪದಿಂದ ಕೂಡಿದ್ದು, ಈ ಬಗ್ಗೆ ಸ್ಪಷ್ಟನೆ ಕೊಡಬೇಕು ಎಂದೂ ಒತ್ತಾಯ ಮಾಡಿದ್ದಾರೆ.

ನಿನ್ನೆ ಜೆಡಿಎಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ದಂಡ ಪಾವತಿಯ ರಸೀದಿ ಪ್ರದರ್ಶಿಸಿ ಮಾತನಾಡಿದ ಅವರು, ದೀಪಾವಳಿ ಸಂದರ್ಭದಲ್ಲಿ ನಮ್ಮ ಮನೆಯಲ್ಲಿ ನಡೆದ ಅಚಾತುರ್ಯದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದೇನೆ. ಈಗಾಗಲೇ ನನಗೆ ಕರೆಂಟ್ ಕಳ್ಳ ಎನ್ನುವ ಲೇಬಲ್ ಅನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಅವರ ಪಟಾಲಂ ಸೇರಿ ಇಟ್ಟಿದ್ದಾರೆ. ನನ್ನನ್ನು ಕರೆಂಟ್ ಕಳ್ಳ ಎನ್ನುವ ಇವರ ಆರೋಪಗಳಿಗೆಲ್ಲ ನಾನು ಹೆದರಲ್ಲ. ನಿಮ್ಮಷ್ಟು ಕಳ್ಳತನ ನಾನು ಮಾಡಿಲ್ಲ. ಬೆಸ್ಕಾಂ ನೀಡಿರುವ ಬಿಲ್ ಹಾಗೂ ದಂಡ ಕಟ್ಟಿದ್ದೇನೆ. ಇನ್ನು ಮುಂದೆ ಕರೆಂಟ್ ಕಳ್ಳ ಎನ್ನುವುದನ್ನು ನಿಲ್ಲಿಸಬೇಕು ಎಂದು ಕಿಡಿಕಾರಿದರು.

 

ಫ್ರೆಶ್ ನ್ಯೂಸ್

Latest Posts

Featured Videos