ಡಿ.10 ರಂದು ಮುಷ್ಕರ

ಡಿ.10 ರಂದು ಮುಷ್ಕರ

ನವದೆಹಲಿ, ನ 22 : ಬ್ಯಾಂಕುಗಳ ವಿಲೀನ ಹಾಗೂ ಜನ ವಿರೋಧಿ ಬ್ಯಾಂಕಿಂಗ್ ಸುಧಾರಣಾ ನೀತಿ ವಿರೋಧಿಸಿ ಬ್ಯಾಂಕ್ ನೌಕರರು ಡಿ. 10 ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಸರ್ಕಾರದ ಈ ನೀತಿಯ ವಿರುದ್ಧ ಬ್ಯಾಂಕ್ ನೌಕರರು ಅಂದು ಸಂಸತ್ ಭವನದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.
ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಮಹಾಮಂಡಲ ಮತ್ತು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ ಜಂಟಿಯಾಗಿ ಈ ಮುಷ್ಕರಕ್ಕೆ ಕರೆಕೊಟ್ಟಿವೆ. ಬ್ಯಾಂಕ್ ಗಳನ್ನು ವಿಲೀನಗೊಳಿಸುವ ಸರ್ಕಾರದ ಕ್ರಮ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬ್ಯಾಂಕ್ ನೌಕರರ ಸಂಘದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos