ಡಿ. 30 ಬೆಂಗಳೂರಿನಲ್ಲಿ ಚುನಾವಣೆ

ಡಿ. 30 ಬೆಂಗಳೂರಿನಲ್ಲಿ ಚುನಾವಣೆ

ಬೆಂಗಳೂರು, ಡಿ. 20: ಕಳೆದ ಅಕ್ಟೋಬರ್ ಒಂದು ಮತ್ತು ಡಿಸೆಂಬರ್ ನಾಲ್ಕರಂದು ಸ್ಥಾಯಿ ಸಮಿತಿಗಳ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಿದ್ದರೂ ಯಾವ ಸದಸ್ಯರೂ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದ ಕಾರಣ ಚುನಾವಣೆಯನ್ನು ಮುಂದೂಡಲಾಗಿತ್ತು. ಮೂಂದೂಡಲಾದ ಚುನಾವಣೆಯನ್ನು ಡಿ.30ರಂದು ನಡೆಸುವ ಸಂಬಂಧ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತ ಅಧಿಸೂಚನೆ ಹೊರಡಿಸಿದ್ದಾರೆ.

12 ಸ್ಥಾಯಿ ಸಮಿತಿಗಳ ಸದಸ್ಯ ಸ್ಥಾನಕ್ಕೆ ಡಿ.30ರ ಬೆಳಗ್ಗೆ 8.30ರಿಂದ 9.30ರವರೆಗೆ ನಾಮಪತ್ರ ಸ್ವೀಕರಿಸಲಾಗುವುದು. ನಂತರ 11.30ಕ್ಕೆ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ಚುನಾವಣೆ ಬಿಬಿಎಂಪಿಯ ಕೇಂದ್ರ ಕಚೇರಿಯ ಕೆಂಪೇಗೌಡ ಪೌರಸಭಾಂಗಣದಲ್ಲಿ ನಡೆಯಲಿದೆ.

 

ಫ್ರೆಶ್ ನ್ಯೂಸ್

Latest Posts

Featured Videos