ದಿ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯಸ್ಮರಣೆ

ದಿ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯಸ್ಮರಣೆ

ಬೆಂಗಳೂರು, ಆ. 16 : ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಮೊದಲ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಲಿದ್ದು, ದಯವಿಟ್ಟು ಬನ್ನಿ ಎಂದು ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ
ಎಸ್.ಶಾಂತಾರಾಮ್ ಮನವಿ ಮಾಡಿದ್ದಾರೆ.
ದಿವಂಗತ ಆಟಲ್ ಬಿಹಾರಿ ವಾಜಪೇಯಿ ಮೊದಲ ವರ್ಷದ ಪುಣ್ಯತಿಥಿ ಕಾರ್ಯಕ್ರಮ ಇಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ‘ಸದೈವ್ ಅಟಲ್’ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪನಮನ ಸಲ್ಲಿಸಿದ್ದಾರೆ. ಭಾರತ ರತ್ನ ಪುರಸ್ಕೃತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಆ. 16, 2018ರಂದು ತಮ್ಮ 93 ವಯಸ್ಸಿನಸ್ಸಿ ನಿಧನರಾಗಿದ್ದು, ಅವರ ಚಿತಾಭಸ್ಮವನ್ನು ದೇಶದ 100 ನದಿಗಳಲ್ಲಿ ವಿಸರ್ಜಿಸಲಾಗಿತ್ತು.

ಫ್ರೆಶ್ ನ್ಯೂಸ್

Latest Posts

Featured Videos