ಬೆಂಗಳೂರು: ದರ್ಶನ್ ಅವರ ಸ್ನೇಹಿತರ ಬಳಗ ದೊಡ್ಡದು. ಸಮಯ ಸಿಕ್ಕಾಗಲೆಲ್ಲ ಅವರು ಗೆಳೆಯರ ಜೊತೆ ಸೇರುತ್ತಾರೆ. ಈಗ ‘ಕಾಟೇರ ಸಿನಿಮಾದ ಯಶಸ್ಸಿನ ಬೆನ್ನಲ್ಲೇ ಅವರು ಸ್ನೇಹಿತರೊಂದಿಗೆ ಒಂದಷ್ಟು ಸಮಯ ಕಳೆದಿದ್ದಾರೆ.
‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರ ಬಗ್ಗೆ ಆಡಿದ ಮಾತುಗಳಿಗೆ ಆಕ್ರೋಶ ವ್ಯಕ್ತವಾಗಿದ್ದು, ಒಕ್ಕಲಿಗರ ಸಂಘದ ಪ್ರಮುಖರು ದರ್ಶನ್ ಅವರ ಹೇಳಿಕೆ ಬಗ್ಗೆ ಮಾತನಾಡಲು ಮುಂದಾಗಿದ್ದಾರೆ. ಇಷ್ಟೆಲ್ಲ ವಿವಾದದ ನಡುವೆಯೂ ದರ್ಶನ್ ಅವರು ತಮ್ಮದೇ ಆದ ಅಭಿಮಾನಿ ಬಳಗದ ಅಪಾರ ಬೆಂಬಲ ಪಡೆಯುತ್ತಿದ್ದಾರೆ.
ಡಿ ಬಾಸ್ಗೆ ಆಪ್ತರಾದ ವಿನಯ್ ಅವರು ಚಾಕೊಲೇಟ್ನಿಂದ ದರ್ಶನ್ ಅವರ ಪ್ರತಿಮೆ ಮಾಡಿಸಿದ್ದಾರೆ. ಅದನ್ನು ನೋಡಿ ದರ್ಶನ್ ಖುಷಿಪಟ್ಟಿದ್ದಾರೆ.
ಈ ಪ್ರತಿಮೆ 6.2 ಅಡಿ ಎತ್ತರ ಇದೆ. ಇದರ ತೂಕ ಬರೋಬ್ಬರಿ 250 ಕೆಜಿಯಾಗಿದೆ. ರಾಮನಗರದಲ್ಲಿ ಈ ಪ್ರತಿಮೆಯನ್ನು ಅನಾವರಣ ಮಾಡಲಾಗಿದೆ. ಈ ಫೋಟೊಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಫೋಟೊದಲ್ಲಿ ದಚ್ಚು ಕೂಡ ಖುಷಿ ವ್ಯಕ್ತಪಡಿಸುತ್ತಿರುವುದು ಕಾಣಬಹುದು.