ಪತ್ನಿಯೊಂದಿಗೆ ವೋಟ್‌ ಮಾಡಿದ ಡಿಬಾಸ್

ಪತ್ನಿಯೊಂದಿಗೆ ವೋಟ್‌ ಮಾಡಿದ ಡಿಬಾಸ್

ಬೆಂಗಳೂರು: ಲೋಕಸಭೆ ಚುನಾವಣೆ 2024ರ ಮೊದಲನೇ ಹಂತದ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ನಗರ ಸೇರಿ 14 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

ಸಾಮಾನ್ಯ ಜನರಂತೆ ಸರತಿ ಸಾಲಿನಲ್ಲಿ ನಿಂತು ಸಿನಿ ತಾರೆಯರು ಮತದಾನ ಮಾಡುತ್ತಿದ್ದಾರೆ. ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಕೂಡ ಪತ್ನಿಯೊಂದಿಗೆ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತಗಟ್ಟೆಗೆ ಪತ್ನಿ ಸಮೇತ ಬಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತದಾನ ಮಾಡಿದ್ದಾರೆ. ಡೆವಿಲ್ ಸಿನಿಮಾದ ಚಿತ್ರೀಕರಣ ವೇಳೆ ಕೈಗೆ ಏಟು ಮಾಡಿಕೊಂಡು ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ದರ್ಶನ್ ಪತ್ನಿ ವಿಜಯಲಕ್ಷ್ಮಿ ಜೊತೆ ಬಂದು ಸರತಿಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos