ಬೆಂಗಳೂರು, ಮೇ . 14, ನ್ಯೂಸ್ ಎಕ್ಸ್ ಪ್ರೆಸ್: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಓ) ನೇಮಕಾತಿ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಜೂನ್ 7 ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾತ್ರ ಜೂನ್ 25 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಶೈಕ್ಷಣಿಕ ವಿದ್ಯಾರ್ಹತೆ: ಬಿ.ಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ: ಸಂಸ್ಥೆಯ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 4,984/-ರೂ ಸ್ಟೈಫೆಂಡ್ ನೀಡಲಾಗುವುದು
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ: ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು. ಮಾಹಿತಿಯನ್ನು ಭರ್ತಿ ಮಾಡಿ hrd@debel.drdo.in ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು
ಸಂದರ್ಶನ ನಡೆಯುವ ಸ್ಥಳ: ಡಿಇಬಿಇಎಲ್ ಕಾಂಪೌಂಡ್, ಡಿಆರ್ಡಿಓ, ಎಡಿಇ ಕ್ಯಾಂಪಸ್, ಸಿವಿ ರಾಮನ್ ನಗರ, ಸುರಂಜನ್ ದಾಸ್ ರೋಡ್, ಬೆಂಗಳೂರು-560093