ಬೆಂಗಳೂರು, ಮಾ.13, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭೆ ಚುನಾವಣೆಯಲ್ಲಿ ಹಣದ ಹರಿವು ಜೋರಾಗತೊಡಗಿದೆ. ಹೀಗೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3.40 ಲಕ್ಷ ರೂ.ಗಳನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ತಿಪಟೂರು ಚೆಕ್ ಪೋಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3.40 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಅರಸೀಕೆರೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಮಾಳ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.5 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಜೀಪ್ ನಲ್ಲಿ ಬಾಲಕೃಷ್ಣ ಮತ್ತು ಸೈಯದ್ ಎಂಬುವರು ಹಣ ಸಾಗಿಸುತ್ತಿದ್ದ ವೇಳೆ ಫ್ಲೈಯಿಂಗ್ ಸ್ಕ್ವಾಡ್ ತಪಾಸಣೆ ನಡೆಸಿದ್ದು, ಹಣ ಪತ್ತೆಯಾಗಿದೆ. ಹಣ ಜಪ್ತಿ ಮಾಡಿ ಇಬ್ಬರನ್ನು ವಿಚಾರಣೆ ನಡೆಸಲಾಗಿದೆ.