ಮಂಡ್ಯ, ಸೆ. 22 : ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಅ. 21ಕ್ಕೆ ಉಪಚುನಾವಣೆ ನಡೆಯುವ ಘೋಷಣೆಯ ಬೆನ್ನಲ್ಲೇ ಸಕ್ಕರೆ ನಾಡು ಮಂಡ್ಯದಲ್ಲಿ ಚುನಾವಣೆಯ ಚಟುವಟಿಕೆಗಳು ಗರಿಗೆದರಿದೆ.
ಕೆ.ಆರ್ ಪೇಟೆ ಕ್ಷೇತ್ರ ದಳಪತಿಗಳಿಗೆ ಪ್ರತಿಷ್ಠೆಯ ಕಣವಾಗಿದ್ದು, ಸೂಕ್ತ ಅಭ್ಯರ್ಥಿಗಾಗಿ ಜೆಡಿಎಸ್ ತಲಾಶ್ ಮಾಡುತ್ತಿದೆ. ಈ ಮೂಲಕ ಭದ್ರಕೋಟೆ ಉಳಿಸಿಕೊಳ್ಳಲು ಜೆಡಿಎಸ್ ಗೆಲ್ಲುವ ಅಭ್ಯರ್ಥಿಗಾಗಿ ಹುಡುಕಾಟ ಆರಂಭ ಮಾಡಿದೆ. ಜೆಡಿಎಸ್ ನಿಂದ ಸ್ಪರ್ಧಿಸಿ ಎರಡನೇ ಬಾರಿಗೆ ಶಾಸಕರಾಗಿದ್ದ ಕೆ.ಸಿ ನಾರಾಯಣಗೌಡರ ಅನರ್ಹತೆಯಿಂದ ಕೆ.ಆರ್.ಪೇಟೆ ಕ್ಷೇತ್ರ ತೆರವಾಗಿತ್ತು. ಹೀಗಾಗಿ ಈ ಉಪ ಚುನಾವಣೆಯಲ್ಲಿ ಗೆದ್ದು ಭದ್ರಕೋಟೆ ಉಳಿಸಿಕೊಳ್ಳಲು ಜೆಡಿಎಸ್ ಕಸರತ್ತು ನಡೆಸುತ್ತಿದೆ.